ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಆರ್‌ಆರ್‌ಆರ್' ಸಿನಿಮಾ: ಅದ್ದೂರಿತನಕ್ಕೆ ಮತ್ತೊಂದು ಹೆಸರೇ ರಾಜಮೌಳಿ!

Last Updated 2 ನವೆಂಬರ್ 2021, 5:30 IST
ಅಕ್ಷರ ಗಾತ್ರ

ಬಹುನಿರೀಕ್ಷಿತ 'ಆರ್‌ಆರ್‌ಆರ್' ಸಿನಿಮಾದ ’ಗ್ಲಿಂಪ್ಸ್‌’ ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ಗ್ಲಿಂಪ್ಸ್‌ ( ವಿಡಿಯೊ ತುಣಕು) ಬಿಡುಗಡೆಯಾಗಿ 24 ಗಂಟೆಗಳಲ್ಲಿ 75 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನು ನೋಡಿದರೆ'ಬಾಹುಬಲಿ' ಸಿನಿಮಾವನ್ನೂ ಮೀರಿಸುವ ದೃಶ್ಯ ವೈಭವ 'ಆರ್‌ಆರ್‌ಆರ್' ಸಿನಿಮಾದಲ್ಲಿ ಇದೆ ಎಂಬ ಸುಳಿವನ್ನು ನಿರ್ದೇಶಕ ರಾಜಮೌಳಿ ನೀಡಿದ್ದಾರೆ.

ಕೇವಲ 45 ಸೆಕೆಂಡ್‌ನ ಈ ವಿಡಿಯೊದಲ್ಲಿ ಆ್ಯಕ್ಷನ್‌ದೃಶ್ಯಗಳು ಮೈನವಿರೇಳುವಂತೆ ಇವೆ. ಗ್ರಾಫಿಕ್ಸ್‌ ಕೆಲಸ ಕೂಡ ಅದ್ಬುತವಾಗಿದೆ. ಜ್ಯೂನಿಯರ್‌ ಎನ್‌ಟಿಆರ್‌ಕಣ್ಣ ಮೇಲಿಂದ ನೆತ್ತರು ಜಾರಿದರೆ,ರಾಮ್ ಚರಣ್ ಕಣ್ಣ ಮುಂದೆ ಅಗ್ನಿ ನರ್ತಿಸುತ್ತದೆ. ಒಟ್ಟಾರೆ ಈ ಗ್ಲಿಂಪ್ಸ್‌ ಅದ್ದೂರಿತನದಿಂದ ಕೂಡಿದೆ.

2022 ರ ಜನವರಿ 7 ರಂದು ‘ಆರ್‌ಆರ್‌ಆರ್‌‘ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಸಂಕ್ರಾಂತಿ ಹಬ್ಬಕ್ಕೆ ಸಿನಿಪ್ರಿಯರಿಗೆ ದೊಡ್ಡ ಉಡುಗೊರೆ ಸಿಕ್ಕಂತಾಗಿದೆ.

ಡಿವಿವಿ ಎಂಟರ್‌ಟೈನ್‌ಮೆಂಟ್ಸ್ ಸಂಸ್ಥೆಯು ಸುಮಾರು ₹400 ಕೋಟಿಯಲ್ಲಿ ನಿರ್ಮಿಸುತ್ತಿರುವ ಈ ಚಿತ್ರವು 20ನೇ ಶತಮಾನದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮರಾಜು ಮತ್ತು ಕೋಮರಂ ಭೀಮ್‌ ಅವರ ಜೀವನ ಕಥೆಯನ್ನು ಆಧರಿಸಿದೆ.

ಈ ಚಿತ್ರದಲ್ಲಿ ರಾಮ್‌ಚರಣ್ ಅಲ್ಲೂರಿ ಸೀತಾರಾಮರಾಜು ಪಾತ್ರದಲ್ಲಿ, ಎನ್‌ಟಿಆರ್ ಜೂನಿಯರ್ ಕೋಮರಂ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ನಟರಾದ ಅಜಯ್ ದೇವ್‌ಗನ್ ಮತ್ತು ಆಲಿಯಾ ಭಟ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT