ಬೆಂಗಳೂರು: ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಸಿನಿಮಾ ಒಂದರ ಬಳಿಕ ಒಂದರಂತೆ ಪ್ರಶಸ್ತಿಗಳನ್ನು ಬಾಚಿಕೊಳ್ಳುತ್ತಿದೆ.
ಇತ್ತೀಚೆಗಷ್ಟೇ ಹಾಲಿವುಡ್ ಕ್ರಿಟಿಕ್ಸ್ ಅವಾರ್ಡ್ಸ್‌ನ ಐದು ವಿಭಾಗಗಳಲ್ಲಿ ಪ್ರಶಸ್ತಿ ಜಯಿಸಿತ್ತು.
ಈ ನಡುವೆ ನಟ ರಾಮಚರಣ್ ಅವರ ಸಂದರ್ಶನದ ವಿಡಿಯೊ ಹಂಚಿರುವ ಮಹೀಂದ್ರಾ ಗ್ರೂಪ್ ಮುಖ್ಯಸ್ಥ ಆನಂದ್ ಮಹೀಂದ್ರಾ, 'ಗ್ಲೋಬಲ್ ಸ್ಟಾರ್' ಎಂದು ಬಣ್ಣಿಸಿದ್ದಾರೆ.
ಇದಕ್ಕೆ ಧನ್ಯವಾದ ಸಲ್ಲಿಸಿರುವ ರಾಮಚರಣ್, ಇದು ಎಲ್ಲ ಕ್ಷೇತ್ರಗಳಲ್ಲೂ ಭಾರತೀಯರು ಮಿಂಚುವ ಕಾಲ ಎಂದು ಪ್ರತಿಕ್ರಿಯಿಸಿದ್ದಾರೆ.
ಆನಂದ್ ಮಹೀಂದ್ರಾ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿವೆ.
ಗೋಲ್ಡನ್ ಗ್ಲೋಬ್ ಪ್ರಶಸ್ತಿ ಬಾಚಿರುವ ಆರ್‌ಆರ್‌ಆರ್ ಈಗ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿದೆ. ಅತ್ಯುತ್ತಮ ಮೂಲ ಗೀತೆ (ಒರಿಜನಲ್) ವರ್ಗದಲ್ಲಿ ಈ ಚಿತ್ರದ 'ನಾಟು...ನಾಟು...' ಹಾಡು ಅಕಾಡೆಮಿ ಅವಾರ್ಡ್ಸ್‌ಗೆ ಆಯ್ಕೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.