ಕನ್ನಡದಲ್ಲೂ ಬರುತ್ತಿದೆ RGV ಲಡ್ಕಿ ಸಿನಿಮಾ: ಮಾರ್ಷಲ್ ಆರ್ಟ್ಸ್ ಮಿಂಚಿನ ಹುಡುಗಿ

ಟಾಲಿವುಡ್ ಹಾಗೂ ಬಾಲಿವುಡ್‌ನಲ್ಲಿ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ(ಆರ್‌ಜಿವಿ) ಹಲವು ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರೆದುರಿಗಿರಿಸಿದ್ದಾರೆ.
ಇದೀಗ ಆರ್‌ಜಿವಿ, ಸಮರ ಕಲೆಯಾಧಾರಿತ ಪ್ಯಾನ್ ಇಂಡಿಯಾ ಸಿನಿಮಾವೊಂದಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಆ ಚಿತ್ರ ‘ಹುಡುಗಿ’ ಎಂಬ ಶೀರ್ಷಿಕೆಯಡಿ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ. ಇದೇ 15ಕ್ಕೆ ಚಿತ್ರ ತೆರೆಗೆ ಬರುತ್ತಿದೆ.
ಚಿತ್ರದ ಕುರಿತು ಮಾಹಿತಿ ನೀಡಿದ ವರ್ಮಾ, ‘ಇದು ತುಂಬಾ ವಿಶೇಷವಾದ ಸಿನಿಮಾ. ನಾನು ಚಿಕ್ಕವನಿದ್ದಾಗ ‘ಎಂಟರ್ ದಿ ಡ್ರ್ಯಾಗನ್’ ಸಿನಿಮಾ ನೋಡಿದ್ದೆ. ಆ ಕಥೆಯ ನಾಯಕ ಬ್ರೂಸ್ಲಿಯಿಂದ ಸ್ಫೂರ್ತಿ ಪಡೆದು ಈ ಸಿನಿಮಾ ಮಾಡಿದ್ದು, ಮಾರ್ಷಲ್ ಆರ್ಟ್ಸ್‌ಗೆ ಸಂಬಂಧಪಟ್ಟ ಸಿನಿಮಾ ಇದಾಗಿದೆ. ಈ ಕಲೆಯನ್ನು ಅಭ್ಯಾಸ ಮಾಡುವವರ ಸಂಖ್ಯೆ ವಿರಳ. ಅದರಲ್ಲೂ ಹೆಣ್ಣು ಮಕ್ಕಳು ಈ ತರಬೇತಿ ಪಡೆಯುವುದು ಕಡಿಮೆ. ನಾಯಕಿ ಪೂಜಾ ಹನ್ನೆರೆಡು ವರ್ಷದಿಂದ ಸಮರಕಲೆ ಅಭ್ಯಾಸ ಮಾಡುತ್ತಿದ್ದು, ಹೀಗಾಗಿ ಆಕೆಯನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿದೆ. ಪ್ರೇಮಕಥೆಯೂ ಚಿತ್ರದಲ್ಲಿದೆ’ ಎಂದರು.
‘ಹುಡುಗಿ’ ಸಿನಿಮಾ ಮಹಿಳಾ ಪ್ರಧಾನ ಸಿನಿಮಾವಾಗಿದೆ. ಆರ್ಟ್ಸಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ಮಿಸಿರುವ ಈ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತೆರೆಕಾಣುತ್ತಿದೆ.
Namaskara Namma Bengaluru 🙏🏻,#LADKI aka #HUDUGI in Kannada…Bangalore promotion look..
Thank you for all the love..Grateful 🙏🏻😊#LADKI / #HUDUGI is arriving in theatres on 15th July 👊💥@RGVzoomin #ramgopalvarma #poojabhalekar #OOTD #promotions #Action #martialarts pic.twitter.com/ASFcRKMk64
— Pooja Bhalekar (@PoojaBofficial) July 11, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.