ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಜನನಾಯಕನಾಗಿ ಹೊರಹೊಮ್ಮಿದ್ದು, ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಲು ಸಜ್ಜಾಗಿದ್ದಾರೆ.

ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆಯುವ ಮೂಲಕ ವಿಜಯ್ ಅವರು, ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರಕ್ಕೆ ಆಘಾತ ನೀಡಿದ್ದಾರೆ. ಡಿಎಂಕೆ 59 ಮತ್ತು ಎಐಎಡಿಎಂಕೆ 47 ಸ್ಥಾನಗಳನ್ನು ಪಡೆದುಕೊಂಡಿವೆ.

ವಿಜಯ್ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿವಿಧ ಕ್ಷೇತ್ರಗಳ ಜನರು ಶುಭ ಹಾರೈಸಿದ್ದಾರೆ. ತಮಿಳುನಾಡಿನಲ್ಲಿ ಉತ್ತಮ ಆಡಳಿತ ನಡೆಸುವಂತೆ ಅವರಿಗೆ ಮನವಿ ಮಾಡಿದ್ದಾರೆ.

ಇದರ ಬೆನ್ನಲ್ಲೇ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಮಾಡಿದ ಪೋಸ್ಟ್ವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಎಲ್ಲರ ಗಮನ ಸೆಳೆದಿದೆ.

ಬಾಲಕ ವಿಜಯ್, 'ಕಲೈಂಜರ್' ಎಂದೇ ಖ್ಯಾತರಾದ ಡಿಎಂಕೆ ಪಕ್ಷದ ಸ್ಥಾಪಕ ಎಂ. ಕರುಣಾನಿಧಿ ಅವರ ಹಿಂದೆ ನಿಂತಿರುವ ಹಳೆಯ ಭಾವಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ.

‘ತನ್ನ ಹಿಂದಿರುವ ಹುಡುಗ ಮುಂದೊಂದು ದಿನ ತಮ್ಮ ಪಕ್ಷವನ್ನು ನಾಶ ಮಾಡುತ್ತಾನೆ ಎಂದು ಕರುಣಾನಿಧಿ ಕನಸು ಮನಸ್ಸಿನಲ್ಲೂ ಭಾವಿಸಿರಲಿಲ್ಲ’ ಎಂದು ಪೋಸ್ಟ್ನಲ್ಲಿ ವರ್ಮಾ ಬರೆದುಕೊಂಡಿದ್ದಾರೆ.

ಈ ಪೋಸ್ಟ್ಗೆ ಹಲವರು ಪ್ರತಿಕ್ರಿಯಿಸಿದ್ದು, ವರ್ಮಾ ಅವರ ಮಾತಿಗೆ ಸಮ್ಮತಿ ನೀಡಿದ್ದಾರೆ.

ಕೊಳತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರು ಟಿವಿಕೆ ಅಭ್ಯರ್ಥಿ ಎದುರು ಹೀನಾಯ ಸೋಲು ಕಂಡಿದ್ದಾರೆ. ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಅಲ್ಪ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.