’ಅಪ್ಪು’ ಸಮಾಧಿಗೆ ಪೂಜೆ ಸಲ್ಲಿಸಿದ ನಿರ್ದೇಶಕ ‘ರಾಮ್ ಗೋಪಾಲ್ ವರ್ಮಾ‘

ಟಾಲಿವುಡ್ ಹಾಗೂ ಬಾಲಿವುಡ್‌ನ ವಿವಾದಿತ ನಿರ್ದೇಶಕ ಎಂದೇ ಖ್ಯಾತರಾಗಿರುವ ರಾಮ್ ಗೋಪಾಲ್ ವರ್ಮಾ ಮಂಗಳವಾರ ಅಪ್ಪು ಸಮಾಧಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ವರ್ಮಾ ಅವರು, ಪುನೀತ್ ಅವರ ಅಂತಿಮ ದರ್ಶನ ಪಡೆದಿರಲಿಲ್ಲ. ಇದೀಗ ಬೆಂಗಳೂರಿಗೆ ಬಂದಿರುವ ಅವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ವರ್ಮಾ ಜೊತೆ ನಟಿ ಅಪ್ಸರಾ ರಾಣಿ ಕೂಡ ಇದ್ದರು. ಅವರೂ ಅಪ್ಪು ಸಮಾಧಿಗೆ ನಮನ ಸಲ್ಲಿಸಿದ್ದಾರೆ.
ಪುನೀತ್ ರಾಜ್‌ಕುಮಾರ್ ನಿಧನರಾಗಿ ಇಂದಿಗೆ 5 ತಿಂಗಳು ಕಳೆದಿದ್ದು, ಕುಟುಂಬ ಸದಸ್ಯರು ಪೂಜೆ ಸಲ್ಲಿಸಲು ಅಪ್ಪು ಸಮಾಧಿ ಇರುವ ಕಂಠೀರವ ಸ್ಟುಡಿಯೋಗೆ ಆಗಮಿಸಿದ್ದರು. ಇದೇ ವೇಳೆ ವರ್ಮಾ ಅವರು ರಾಘವೇಂದ್ರ ರಾಜ್‌ಕುಮಾರ್ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
ಇದನ್ನೂ ಓದಿ: Oscars 2022 | ‘ಕೋಡ’ ಅತ್ಯುತ್ತಮ ಚಿತ್ರ, ವಿಲ್ ಸ್ಮಿತ್ ಅತ್ಯುತ್ತಮ ನಟ
ಅಶ್ವಿನಿ ಪುನೀತ್ ರಾಜ್‌ಕುಮಾರ್, ವಂದಿತಾ ರಾಘವೇಂದ್ರ ರಾಜ್‌ಕುಮಾರ್ ಸೇರಿದಂತೆ ಕುಟುಂಬಸ್ಥರು ‘ಅಪ್ಪು ಸಮಾಧಿ‘ಗೆ ಪೂಜೆ ಸಲ್ಲಿಸಿದರು.
ಇದನ್ನೂ ಓದಿ: Oscars 2022: ವೇದಿಕೆ ಮೇಲೆ ಸಹ ನಟನ ಕೆನ್ನೆಗೆ ಹೊಡೆದ ನಟ ವಿಲ್ ಸ್ಮಿತ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.