ತೆಲುಗಿನ ನಟ ರಾಮ್ ಪೋತಿನೇನಿ ನಟನೆಯ ಜೊತೆಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ಅವರ ಜನ್ಮದಿನದಂದು ಹೊಸ ಸಿನಿಮಾ ಘೋಷಣೆಯಾಗಿದೆ.

ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ‘ಆಂಧ್ರ ಕಿಂಗ್ ತಾಲೂಕಾ’ ಸಿನಿಮಾಗೆ ಸಾಹಿತ್ಯ ಬರೆದಿದ್ದ ರಾಮ್ ಪೋತಿನೇನಿ, ಒಂದು ಹೆಜ್ಜೆ ಮುಂದಕ್ಕಿಟ್ಟು ನಿರ್ದೇಶನಕ್ಕೆ ಕೈಹಾಕಿದ್ದಾರೆ. ತಮ್ಮದೇ 23ನೇ ಚಿತ್ರಕ್ಕೆ ರಾಮ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವೀರ ಪಾತ್ರದಲ್ಲಿ ರಾಮ್ ಪೋತಿನೇನಿ ನಟಿಸುತ್ತಿದ್ದು, ಜಾಕೆಟ್ ಧರಿಸಿ ಸ್ಟೈಲಿಷ್ ಆಗಿ ಅವರು ಕಾಣಿಸಿಕೊಂಡಿದ್ದಾರೆ. ಸಿನಿಮಾಗೆ ‘RAMO23’ ಎಂಬ ತಾತ್ಕಾಲಿಕ ಶೀರ್ಷಿಕೆ ಇಡಲಾಗಿದೆ.

ಸಿನಿಮಾದ ಚಿತ್ರೀಕರಣ ಜೂನ್ನಲ್ಲಿ ಆರಂಭವಾಗಲಿದ್ದು, ಡಿಸೆಂಬರ್ನಲ್ಲಿ ಚಿತ್ರ ಬಿಡುಗಡೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾವಾಗಿದ್ದು, ತಮ್ಮದೇ ರಾಪೋ ಸಿನಿಮ್ಯಾಟಿಕ್ಸ್ನಡಿ ನಿರ್ಮಾಣ ಮಾಡುತ್ತಿದ್ದಾರೆ ರಾಮ್. ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. v

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.