‘ಆಪರೇಷನ್ ಅಲಮೇಲಮ್ಮ’ ಖ್ಯಾತಿಯ ನಟ ರಿಷಿ ನಟಿಸಿರುವ ‘ರಾಮನ ಅವತಾರ’ ಸಿನಿಮಾ ಮೇ 10ಕ್ಕೆ ಬಿಡುಗಡೆಯಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಮೊದಲನೇ ದಿನದ ಟಿಕೆಟ್‌ಗೆ ₹99 ದರ ನಿಗದಿಪಡಿಸಿದೆ ಚಿತ್ರತಂಡ.

ಏಕಪರದೆ ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲೂ ಇದೇ ದರದಲ್ಲಿ ಟಿಕೆಟ್ ದೊರೆಯಲಿದೆ. ಮೇ 9ರಂದು ಚಿತ್ರದ ಪೇಯ್ಡ್ ಪ್ರೀಮಿಯರ್ ಪ್ರದರ್ಶನ ಏರ್ಪಡಿಸಲಾಗಿದ್ದು, ಈ ಶೋಗೂ ಟಿಕೆಟ್ ದರವನ್ನು 99 ರೂಪಾಯಿ ನಿಗದಿ ಮಾಡಲಾಗಿದೆ. ಹೀಗೆ ಮೇ 9 ಮತ್ತು 10ರಂದು ಮಾತ್ರ ಕಡಿಮೆ ಬೆಲೆಯಲ್ಲಿ ‘ರಾಮನ ಅವತಾರ’ ಸಿನಿಮಾ ಟಿಕೆಟ್ ದೊರೆಯಲಿದೆ. ವಿಕಾಸ್ ಪಂಪಾಪತಿ ಆ್ಯಕ್ಷನ್ ಕಟ್ ಹೇಳಿರುವ ‘ರಾಮನ ಅವತಾರ’ ಸಿನಿಮಾದಲ್ಲಿ ರಿಷಿಗೆ ಜೋಡಿಯಾಗಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಟಿಸಿದ್ದಾರೆ. ನಿರ್ದೇಶಕರಾಗಿ ಈ ಸಿನಿಮಾ ಮೂಲಕ ವಿಕಾಸ್ ಮೊದಲ ಹೆಜ್ಜೆ ಇಟ್ಟಿದ್ದಾರೆ.

ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾವನ್ನು ‘ಆಪರೇಷನ್ ಅಲಮೇಲಮ್ಮ’ ಚಿತ್ರ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ನಿರ್ಮಾಣ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.