ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿನಿ ಸುದ್ದಿ: ಮೇ 10ಕ್ಕೆ ‘ರಾಮನ ಅವತಾರ’

Published 31 ಮಾರ್ಚ್ 2024, 18:23 IST
Last Updated 31 ಮಾರ್ಚ್ 2024, 18:23 IST
ಅಕ್ಷರ ಗಾತ್ರ

‘ಆಪರೇಷನ್‌ ಅಲಮೇಲಮ್ಮ’ ಖ್ಯಾತಿಯ ರಿಷಿ ನಾಯಕನಾಗಿ ನಟಿಸಿರುವ ‘ರಾಮನ ಅವತಾರ’ ಚಿತ್ರ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಕಳೆದ ವರ್ಷ ಜೂನ್‌ನಲ್ಲಿಯೇ ತೆರೆಗೆ ಬರಲು ಸಿದ್ಧವಿದ್ದ ಚಿತ್ರ, ಮೇ 10ರಂದು ಬಿಡುಗಡೆಯಾಗುತ್ತಿದೆ.‌

ಹಾಸ್ಯಮಯ ಕಥಾ ಹಂದರ ಹೊಂದಿರುವ ಚಿತ್ರವನ್ನು ವಿಕಾಸ್ ಪಂಪಾಪತಿ ನಿರ್ದೇಶಿಸಿದ್ದಾರೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್‌ ಅಡಿಯಲ್ಲಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ರಿಷಿ ವಿಶೇಷ ವಿಡಿಯೊ ಮೂಲಕ ರಾಮನ ಅವತಾರ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ‘ಮೇಬಿ ಅಲ್ಲ ಪಕ್ಕ ಮೇ 10ಕ್ಕೆ ಬರುತ್ತೇವೆ. ಎಲೆಕ್ಷನ್ ರಿಸಲ್ಟ್‌ಗೂ ಮೊದ್ಲೇ ನಮ್ಮ ಸಿನಿಮಾ ರಿಸಲ್ಟ್ ಬರಲಿದೆ’ ಎಂದು ರಿಷಿ ತಿಳಿಸಿದ್ದಾರೆ.

ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೆ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಚಿತ್ರೀಕರಣಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT