ಬಹು ನಿರೀಕ್ಷಿತ ‘ರಾಮಾಯಣ–2’ ಚಿತ್ರದ ಚಿತ್ರೀಕರಣ ಮುಂಬೈನಲ್ಲಿ ಪ್ರಾರಂಭವಾಗಿದ್ದು, ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆಂದು ಹಿಂದಿ ಮಾಧ್ಯಮಗಳು ವರದಿ ಮಾಡಿವೆ. ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ರಾಮನ ಪಾತ್ರ ಮಾಡುತ್ತಿದ್ದಾರೆ. ವಸ್ತ್ರ ವಿನ್ಯಾಸಕಿ ರಿಂಪಲ್, ರಣಬೀರ್ ಕಪೂರ್ ಜತೆಗೆ ಸೆಟ್ನಲ್ಲಿರುವ ಛಾಯಾಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ನಿರ್ಮಾಪಕ ನಮಿತ್ ಮಲ್ಹೋತ್ರ ಕೂಡ ಚಿತ್ರೀಕರಣ ಪ್ರಾರಂಭವಾಗಿರುವ ಸುಳಿವು ನೀಡಿದ್ದಾರೆ.

ಎರಡು ಭಾಗಗಳಲ್ಲಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ. ಮೊದಲ ಭಾಗದ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಮೊದಲ ಭಾಗವನ್ನು ಈ ವರ್ಷ ದೀಪಾವಳಿ ಸಮಯದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಪ್ರೇಕ್ಷಕರ ಪ್ರತಿಕ್ರಿಯೆಗಾಗಿ ಚಿತ್ರದ ಒಂದಷ್ಟು ದೃಶ್ಯಗಳನ್ನು ಚಿತ್ರತಂಡ ಜನಪ್ರಿಯ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಸೇರಿದಂತೆ ಅಮೆರಿಕದಲ್ಲಿನ ಆಯ್ದ ಪ್ರೇಕ್ಷಕರಿಗೆ ಈಗಾಗಲೇ ತೋರಿಸಿದ್ದು, ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂಬ ವರದಿಯಿದೆ.

ಚಿತ್ರದಲ್ಲಿ ಯಶ್ ಕೂಡ ನಟಿಸುತ್ತಿದ್ದಾರೆ. ರಾವಣನಾಗಿ ಕಾಣಿಸಿಕೊಳ್ಳುತ್ತಿರುವ ಯಶ್ ಕೂಡ ಶೀಘ್ರದಲ್ಲಿ ಚಿತ್ರತಂಡ ಸೇರಿಕೊಳ್ಳಲಿದ್ದಾರೆ. ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಿದ್ದು, ಅವರು ಸದ್ಯ ಎ.ಆರ್. ಮುರುಗದಾಸ್ ನಿರ್ದೇಶನದ ಬೇರೊಂದು ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ. ಅದು ಮುಗಿದ ತಕ್ಷಣ ಅವರು ಕೂಡ ‘ರಾಮಾಯಣ–2’ ಚಿತ್ರ ತಂಡ ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಸೀತೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಸೀತಾಪಹರಣ ನಂತರದ ಕಥೆ ‘ರಾಮಾಯಣ–2’ರಲ್ಲಿರಲಿದೆ. ರಾಮ–ರಾವಣರ ಯುದ್ಧದ ಸನ್ನಿವೇಶಗಳು ಚಿತ್ರೀಕರಣಗೊಳ್ಳಲಿದ್ದು, ರಣಬೀರ್ ಹಾಗೂ ಯಶ್ ನಡುವಿನ ಸಮರದ ಸನ್ನಿವೇಶಗಳು ಈ ಭಾಗದಲ್ಲಿ ಹೆಚ್ಚಿರಲಿವೆ.

ರಣಬೀರ್ ಕಪೂರ್ ಮಾರ್ಚ್ ತಿಂಗಳಲ್ಲಿ ಸಂಜಯ್ ಲೀಲಾ ಬನ್ಸಾಲಿ ಅವರ ‘ಲವ್ ಆ್ಯಂಡ್ ವಾರ್’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಬೇಕಿತ್ತು. ಆದರೆ, ಬನ್ಸಾಲಿ ಅವರ ಆರೋಗ್ಯ ಸಮಸ್ಯೆಯಿಂದಾಗಿ ಆ ಚಿತ್ರದ ಚಿತ್ರೀಕರಣ ಮುಂದಕ್ಕೆ ಹೋಗಿದೆ. ಹೀಗಾಗಿ ರಣಬೀರ್ ರಾಮಾಯಣ ಸೆಟ್ಗೆ ಮರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.