ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ತೀರ್ಥರೂಪ ತಂದೆಯವರಿಗೆ’ ಜಗನ್ನಾಥನ ಪತ್ರ

Published 23 ಆಗಸ್ಟ್ 2024, 23:52 IST
Last Updated 23 ಆಗಸ್ಟ್ 2024, 23:52 IST
ಅಕ್ಷರ ಗಾತ್ರ

‘ಹೊಂದಿಸಿ ಬರೆಯಿರಿ’ ಸಿನಿಮಾ ಮೂಲಕ ಕನ್ನಡದ ಪ್ರೇಕ್ಷಕರಿಗೆ ಹತ್ತಿರವಾದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್‌ ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾಗೂ ‘ತೀರ್ಥರೂಪ ತಂದೆಯವರಿಗೆ’ ಎಂಬ ಭಿನ್ನವಾದ ಶೀರ್ಷಿಕೆಯೊಂದನ್ನು ನೀಡಿದ್ದಾರೆ. 

ಇತ್ತೀಚೆಗೆ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆಯಿತು. ‘ಹೊಂದಿಸಿ ಬರೆಯಿರಿ’ ಸಿನಿಮಾ ನಟ ನವೀನ್ ಶಂಕರ್ ಹಾಗೂ ನಟಿ ಅರ್ಚನಾ ಜೋಯಿಸ್ ಕ್ಯಾಮೆರಾಗೆ ಚಾಲನೆ ನೀಡಿದರು. ತೆಲುಗಿನಲ್ಲಿ ‘ಗುಪ್ಪೆಡಂತ ಮನಸು’ ಧಾರಾವಾಹಿ ಮೂಲಕ ಗುರುತಿಸಿಕೊಂಡಿರುವ ನಿಹಾರ್ ಮುಖೇಶ್ ‘ತೀರ್ಥರೂಪ ತಂದೆಯವರಿಗೆ’ ಸಿನಿಮಾ ಮೂಲಕ ನಾಯಕನಾಗಿ ಚಂದನವನಕ್ಕೆ ಹೆಜ್ಜೆ ಇಡುತ್ತಿದ್ದಾರೆ. ಸದ್ಯ ಮುಖೇಶ್ ನಾಯಕನಾಗಿ ನಟಿಸಿರುವ ‘ಗೀತಾ ಶಂಕರಂ‌’ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿದೆ. ಇದರ ಬೆನ್ನೆಲ್ಲೇ‌ ನಿಹಾರ್ ಮುಖೇಶ್‌ ಜಗನ್ನಾಥ್‌ ಸಿನಿಮಾಗೂ ಹಸಿರುನಿಶಾನೆ ನೀಡಿದ್ದಾರೆ. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಈ ಸಿನಿಮಾ ಮೂಡಿಬರಲಿದೆ. ತೆಲುಗಿನಲ್ಲಿ ಚಿತ್ರಕ್ಕೆ ‘ಪ್ರಿಯಮೈನ ನಾನ್ನಕು’ ಎಂಬ ಶೀರ್ಷಿಕೆ ಇಡಲಾಗಿದೆ. 

ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್‌ನಡಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ರಾಮೇನಹಳ್ಳಿ ಜಗನ್ನಾಥ್‌ ಅವರೇ ಕಥೆ ಬರೆದಿದ್ದಾರೆ. ‘ಹೊಂದಿಸಿ ಬರೆಯಿರಿ’ ಚಿತ್ರ ನಿರ್ಮಾಣ ಮಾಡಿದ್ದ ಸಂಡೇ ಸಿನಿಮಾಸ್ ಈ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದೆ. ಕೌಟುಂಬಿಕ ಹಿನ್ನೆಲೆಯ ಕಥೆಯುಳ್ಳ ಈ ಸಿನಿಮಾಗೆ ದೀಪಕ್ ಯರಗೇರಾ ಛಾಯಾಚಿತ್ರಗ್ರಹಣ, ಪ್ರಶಾಂತ್ ರಾಜಪ್ಪ ಸಂಭಾಷಣೆ ಇದೆ. ಶೀಘ್ರದಲ್ಲೇ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT