ಸೋಮವಾರ, ಮಾರ್ಚ್ 8, 2021
22 °C

ರಮೇಶ್ ಅರವಿಂದ್ ಪುತ್ರಿಯ ಅದ್ಧೂರಿ ಆರತಕ್ಷತೆ: ಮೇಳೈಸಿದ ತಾರೆಗಳು– ರಾಜಕೀಯ ನಾಯಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಮೇಶ್ ಅರವಿಂದ್– ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಅವರ ವಿವಾಹ ಆರತಕ್ಷತೆ ಸಮಾರಂಭ ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಅದ್ಧೂರಿಯಾಗಿ ನೆರವೇರಿತು.

ರಾಜಕೀಯ ಕ್ಷೇತ್ರ ಹಾಗೂ ಚಿತ್ರರಂಗದ ಗಣ್ಯರು ಈ ಶುಭ ಸಮಾರಂಭದಲ್ಲಿ ಪಾಲ್ಗೊಂಡು ನವ ಜೋಡಿಯನ್ನು ಹಾರೈಸಿದರು.

ಬೆಂಗಳೂರಿನ ರೆಸಾರ್ಟ್‌ವೊಂದರಲ್ಲಿ ಕಳೆದ ಡಿಸೆಂಬರ್‌ 28ರಂದು ವಿವಾಹವು ಕುಟುಂಬ ಹಾಗೂ ಬಂಧುಬಳಗದ ಸಮ್ಮುಖದಲ್ಲಿ ಕೋವಿಡ್‌ 19 ನಿಯಮಾನುಸಾರ ನಡೆದಿತ್ತು.

ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ, ಸಚಿವರಾದ ಆರ್‌. ಅಶೋಕ್‌, ಸುರೇಶ್‌ ಕುಮಾರ್‌, ಡಾ. ಸುಧಾಕರ್‌, ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಸಂಸದರಾದ ಸುಮಲತಾ ಅಂಬರೀಷ್‌, ತೇಜಸ್ವಿ ಸೂರ್ಯ, ಶಾಸಕ ಮುನಿರತ್ನ ಸೇರಿದಂತೆ ಹಲವು ರಾಜಕಾರಣಿಗಳು ಆರತಕ್ಷತೆಯಲ್ಲಿ ಪಾಲ್ಗೊಂಡು, ನವದಂಪತಿಗೆ ಶುಭ ಹಾರೈಸಿದರು.

ಅಲ್ಲದೆ, ನಟರಾದ ರವಿಚಂದ್ರನ್‌, ಶಿವರಾಜ್‌ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌, ಪುನೀತ್‌ರಾಜ್‌ಕುಮಾರ್‌, ಸುದೀಪ್‌, ಯಶ್‌, ಶ್ರೀಮುರಳಿ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಸಂಗೀತ ನಿರ್ದೇಶಕರಾದ ಹಂಸಲೇಖ, ಗುರುಕಿರಣ್‌, ಗಾಯಕ ವಿಜಯ್‌ ಪ್ರಕಾಶ್‌, ನಟಿಯರಾದ ರಾಧಿಕಾ ಪಂಡಿತ್‌, ಹರ್ಷಿಕಾ ಪೂಣಚ್ಚ ಸೇರಿದಂತೆ ಸಿನಿಮಾರಂಗದ ಹಲವು ಮಂದಿ ಈ ಸಮಾರಂಭದಲ್ಲಿ ಪಾಲ್ಗೊಂಡು, ನವಜೋಡಿಯನ್ನು ಹರಿಸಿದರು.

ಸುದೀಪ್‌, ಯಶ್‌, ಹರ್ಷಿಕಾ ಪೂಣಚ್ಚ ಹಾಗೂ ರಮೇಶ್‌ ಅರವಿಂದ್‌ ಅವರು ನವ ನವದಂಪತಿಯ ಜತೆಗೆ ಭರ್ಜರಿ ಸ್ಟೆಪ್‌ ಹಾಕಿ ಸಂಭ್ರಮಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು