ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಮೇಶ್‌ ಸುರೇಶ್‌’ ಚಿತ್ರದ ಟ್ರೇಲರ್‌ ಬಿಡುಗಡೆ

Published 7 ಜೂನ್ 2024, 15:22 IST
Last Updated 7 ಜೂನ್ 2024, 15:22 IST
ಅಕ್ಷರ ಗಾತ್ರ

ಆರ್. ಕೆ. ಟಾಕೀಸ್ ಲಾಂಛನದಲ್ಲಿ ಪಿ.ಕೃಷ್ಣ ಹಾಗೂ ಬಿ.ಶಂಕರ್ ಅವರು ನಿರ್ಮಾಣ ಮಾಡಿರುವ, ನಾಗರಾಜ್ ಮಲ್ಲಿಗೇನಹಳ್ಳಿ ಹಾಗೂ ರಘುರಾಜ್ ಗೌಡ ನಿರ್ದೇಶನದ  ಗುಬ್ಬಿ ವೀರಣ್ಣ ಅವರ ಮರಿಮಗ ಬೆನಕ ಹಾಗೂ ಯಶು ರಾಜ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿರುವ ‘ರಮೇಶ್ ಸುರೇಶ್’ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಯಿತು.

ನಟರಾದ ಸಂತೋಷ್ ಆರ್ಯನ್, ನಾಗೇಂದ್ರ ಅರಸ್, ವಿಜಯ್ ಚೆಂಡೂರ್‌  ಅತಿಥಿಗಳಾಗಿ ಬಂದಿದ್ದರು. ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ಇಬ್ಬರು ನಿರ್ಮಾಪಕರು, ಇಬ್ಬರು ನಿರ್ದೇಶಕರು ಹಾಗೂ ಇಬ್ಬರು ನಾಯಕರಿರುವುದು ಈ ಚಿತ್ರದ ವಿಶೇಷ. ಟ್ರೇಲರ್, ಟೀಸರ್ ಹಾಗೂ ಹಾಡುಗಳು ಮೆಚ್ಚುಗೆ ಪಡೆದುಕೊಳ್ಳುತ್ತಿವೆ‌. ಇದೇ ಜೂನ್ 21ರಂದು ತೆರೆಗೆ ಬರಲಿದೆ ಎಂದು ತಂಡ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT