ಬಿಗ್ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್ ನಟಿಸಿರುತ್ತಿರುವ ‘ರಾಮರಸ’ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ಸಸ್ಪೆನ್ಸ್, ಥ್ರಿಲ್ಲರ್ ಜಾನರ್ನ ಚಿತ್ರಕ್ಕೆ ಬಿ.ಎಂ.ಗಿರಿರಾಜ್ ಆ್ಯಕ್ಷನ್ ಕಟ್ ಹೇಳಿದ್ದಾರೆ.

‘ನಮ್ಮ ನೆಲದ ಸೊಗಡಿನ ಕಥೆಯನ್ನು ಹೊಂದಿರುವ ಚಿತ್ರ. ಚಿತ್ರೀಕರಣ ಮುಗಿದು ಪೋಸ್ಟ್ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಈ ವರ್ಷ ಮೊದಲಾರ್ಧದಲ್ಲಿ ಚಿತ್ರವನ್ನು ತೆರೆಗೆ ತರುವ ಯೋಜನೆಯಿದೆ’ ಎನ್ನುತ್ತಾರೆ ನಿರ್ದೇಶಕ.

ಕಾರ್ತಿಕ್ ನಟರಾಜನ ಭಂಗಿಯಲ್ಲಿ ನೃತ್ಯ ಮಾಡುತ್ತಿರುವ ಪೋಸ್ಟರ್ ಅನ್ನು ಚಿತ್ರತಂಡ ಈ ಹಿಂದೆ ಬಿಡುಗಡೆಗೊಳಿಸಿತ್ತು. ಚಿತ್ರದಲ್ಲಿ ಬಾಲಾಜಿ ಮನೋಹರ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು, ರಂಗಭೂಮಿಯ ಹದಿನಾರು ಹೊಸ ಕಲಾವಿದರು ಇದರೊಂದಿಗೆ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.

ಚಿತ್ರಕ್ಕೆ ಗುರು ದೇಶಪಾಂಡ, ನಾಮದೇವ ಭಟ್ಟರ್ ಬಂಡವಾಳ ಹೂಡಿದ್ದಾರೆ. ಭರತ್ ಬಿ. ಜೆ. ಸಂಗೀತ, ಕೆ.ಕೆ. ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.