ಆರ್ಆರ್ಆರ್ ತಂಡದೊಂದಿಗೆ ಕಾಣಿಸಿಕೊಂಡ ನಟ ರಾಣಾ ದಗ್ಗುಬಾಟಿ

ಮುಂಬೈ: 2022 ರ ಜನವರಿ 7 ರಂದು ‘ಆರ್ಆರ್ಆರ್‘ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರ ತಂಡವು ದೇಶದ ಪ್ರಮುಖ ನಗರಗಳಲ್ಲಿ ಆರ್ಆರ್ಆರ್ನ ಪ್ರಚಾರದಲ್ಲಿ ತೊಡಗಿದೆ. ಬಾಹುಬಲಿ ಖ್ಯಾತಿಯ ರಾಣಾ ದಗ್ಗುಬಾಟಿ ಅವರು ಈ ತಂಡದೊಂದಿಗೆ ಕಾಣಿಸಿಕೊಂಡಿದ್ದಾರೆ.
ಈ ಕುರಿತು ಚಿತ್ರವೊಂದನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ನಿರ್ದೇಶಕ ರಾಜಮೌಳಿ, ‘ಮುಂಬೈನ ಈ ಮುಂಜಾವಿನಲ್ಲಿ ‘R' ಜೊತೆ ‘RRR' ಎಂದು ಬರೆದುಕೊಂಡಿದ್ದಾರೆ.
ರಾಜಮೌಳಿ ಹಂಚಿಕೊಂಡಿರುವ ಚಿತ್ರದಲ್ಲಿ ರಾಮ್ಚರಣ್, ಎನ್ಟಿಆರ್ ಜೂನಿಯರ್, ರಾಜಮೌಳಿ ಮತ್ತು ರಾಣಾ ದಗ್ಗುಬಾಟಿ ಇದ್ದಾರೆ.
ಡಿವಿವಿ ಎಂಟರ್ಟೈನ್ಮೆಂಟ್ಸ್ ಸಂಸ್ಥೆಯು ಸುಮಾರು ₹400 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಈ ಚಿತ್ರವು 20ನೇ ಶತಮಾನದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮರಾಜು ಮತ್ತು ಕೋಮರಂ ಭೀಮ್ ಅವರ ಜೀವನ ಕಥೆಯನ್ನು ಆಧರಿಸಿದೆ.
ಈ ಚಿತ್ರದಲ್ಲಿ ರಾಮ್ಚರಣ್ ಅಲ್ಲೂರಿ ಸೀತಾರಾಮರಾಜು ಪಾತ್ರದಲ್ಲಿ, ಎನ್ಟಿಆರ್ ಜೂನಿಯರ್ ಕೋಮರಂ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ನಟರಾದ ಅಜಯ್ ದೇವಗನ್ ಮತ್ತು ಆಲಿಯಾ ಭಟ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.