ಬುಧವಾರ, ಅಕ್ಟೋಬರ್ 5, 2022
27 °C

ರಾಣಾ ದಗ್ಗುಬಾಟಿ–ಮಿಹೀಕಾ ಸಂಸಾರದಲ್ಲಿ ಬಿರುಕು? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಟಾಲಿವುಡ್‌ ಸ್ಟಾರ್‌ ನಟ ರಾಣಾ ದಗ್ಗುಬಾಟಿ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಎಲ್ಲಾ ಫೋಟೊಗಳನ್ನು ಡಿಲೀಟ್‌ ಮಾಡುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಸೇರಿದಂತೆ ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ. ರಾಣಾ ಅವರು ರೂಪದರ್ಶಿ ಮಿಹೀಕಾ ಬಜಾಜ್‌ ಅವರನ್ನು ಮದುವೆಯಾಗಿದ್ದು ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿರುವ ಸಂದರ್ಭದಲೇ  ಫೋಟೊಗಳನ್ನು ಡಿಲೀಟ್‌ ಮಾಡಿದ್ದಾರೆ.

ಇದನ್ನೂ ಓದಿ:  ನನ್ನ ಲೈಂಗಿಕ ಜೀವನ ಆಸಕ್ತಿದಾಯಕವಾಗಿಲ್ಲದ ಕಾರಣ ಕರಣ್​ ನನ್ನ ಕರೆಯಲ್ಲ: ತಾಪ್ಸಿ 

ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ರಾಣಾ ಮತ್ತು ಮಿಹೀಕಾ ಬಜಾಜ್‌ ಸಂಸಾರದಲ್ಲಿ ಬಿರುಕು ಮೂಡಿದ್ದು ಅವರು ಪರಸ್ಪರ ದೂರವಾಗುತ್ತಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ತೆಲುಗಿನ ಮಾಧ್ಯಮಗಳು ಕೂಡ ರಾಣಾ, ಮಿಹೀಕಾ ನಡುವೆ ವೈಮನಸ್ಸು ಮೂಡಿದೆ ಎಂದು ವರದಿ ಪ್ರಕಟಿಸಿವೆ.

ರಾಣಾ ಅವರು ಕೆಲವು ದಿನಗಳ ಮಟ್ಟಿಗೆ ಸಾಮಾಜಿಕ ಜಾಲತಾಣಗಳಿಂದ ದೂರ ಇರಲು ನಿರ್ಧರಿಸಿದ್ದಾರೆ. ಹೀಗಾಗಿ ಎಲ್ಲಾ ಫೋಟೊಗಳನ್ನು ಡಿಲೀಟ್‌ ಮಾಡಿದ್ದಾರೆ. ಅವರ ಸಂಸಾರದಲ್ಲಿ ಯಾವುದೇ ಬಿರುಕು ಮೂಡಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ.

ಓದಿ: BiggBoss Kannada OTTಗೆ ಚಾಲನೆ: 16 ಸ್ಪರ್ಧಿಗಳ ಪೂರ್ಣ ಮಾಹಿತಿ ಇಲ್ಲಿದೆ

ಸಾಮಾಜಿಕ ಮಾಧ್ಯಮಗಳಿಂದ ದೂರ ಇರುವ ಸಲುವಾಗಿ ಎಲ್ಲಾ ಫೋಟೊಗಳನ್ನು ಡಿಲೀಟ್‌ ಮಾಡಬೇಕೆ? ಅದರಲ್ಲೂ ಪತ್ನಿ ಮಿಹೀಕಾ ಅವರ ಜತೆ ಇರುವ ಫೋಟೊಗಳನ್ನು ಯಾಕೆ ಡಿಲೀಟ್‌ ಮಾಡಿದ್ದಾರೆ? ಎಂಬ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

ರಾಣಾ ಸಂಸಾರದ ಬಗ್ಗೆ ತೆಲುಗಿನ ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿವೆ. ಇತ್ತ ಮಿಹೀಕಾ ವಿವಾಹ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ರಾಣಾ ಜೊತೆಗಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

ಇವುಗಳನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು