ಬುಧವಾರ, ಏಪ್ರಿಲ್ 14, 2021
24 °C

ಚಿರಂಜೀವಿ ಸರ್ಜಾ ನಟನೆಯ ‘ರಣಂ’ ಚಿತ್ರ ಮಾರ್ಚ್‌ 26ಕ್ಕೆ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾ ಅವರು ಅಭಿನಯಿಸಿದ್ದ ‘ರಣಂ’ ಚಿತ್ರವು ಮಾರ್ಚ್ 26ರಂದು ತೆರೆಯ ಮೇಲೆ ಬರಲಿದೆ. 

ಸುಮಾರು 250ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ರಣಂ’ ತೆರೆ ಕಾಣಲಿದೆ. ಆರ್ ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಶ್ರೀನಿವಾಸ್(ಕನಕಪುರ) ಅವರು ನಿರ್ಮಾಣ ಮಾಡಿರುವ 21ನೇ ಚಿತ್ರವಿದು. ಕಿರಣ್ ಗೌಡ ಈ ಚಿತ್ರದ ಸಹ ನಿರ್ಮಾಪಕರು.

ಚಿರಂಜೀವಿ ಸರ್ಜಾ‌ ನಟಿಸಿ, ಡಬ್ಬಿಂಗ್ ಸಹ ಪೂರ್ಣಗೊಳಿಸಿರುವ ಚಿತ್ರ ‘ರಣಂ’. ಇದು ಅವರೆ ಡಬ್ಬಿಂಗ್ ಮಾಡಿರುವ ಕೊನೆಯ ಚಿತ್ರವಾಗಿದೆ. ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಚಿರಂಜೀವಿ ಸರ್ಜಾ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ಎರಡು ತಿಂಗಳ ಹಿಂದೆಯಷ್ಟೇ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿತ್ತು.

ಚಿತ್ರದಲ್ಲಿ ಆ ದಿನಗಳು ಖ್ಯಾತಿಯ ಚೇತನ್‌, ವರಲಕ್ಷ್ಮೀ ಶರತ್ ಕುಮಾರ್, ಸಾಧುಕೋಕಿಲ, ಬುಲೆಟ್ ಪ್ರಕಾಶ್, ಮಧುಸೂದನ್, ಕಾರ್ತಿಕ್, ಅಭಿಲಾಶ್, ಹರೀಶ್, ಪ್ರವೀಣ್, ಬೆಸೆಂಟ್ ರವಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ವಿ.ಸಮುದ್ರ ನಿರ್ದೇಶನದ ಈ ಚಿತ್ರಕ್ಕೆ ರವಿಶಂಕರ್ ಹಾಗೂ ಎಸ್ ಚಿನ್ನ ಸಂಗೀತ ನೀಡಿದ್ದಾರೆ. ನಿರಂಜನ್ ಬಾಬು ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ, ಥ್ರಿಲ್ಲರ್ ಮಂಜು, ರವಿವರ್ಮ ಹಾಗೂ ವಿಜಯ್ ಅವರ ಸಾಹಸ ನಿರ್ದೇಶನವಿದೆ. ಚಿತ್ರದ ಹಾಡುಗಳನ್ನು ಚೇತನ್ ಕುಮಾರ್ ಹಾಗೂ ಎ.ಪಿ.ಅರ್ಜುನ್ ರಚಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು