ಸುಮಾರು ಹನ್ನೊಂದು ವರ್ಷಗಳ ಬಳಿಕ ಬಾಲಿವುಡ್ ನಟರಾದ ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ಅವರು ‘ಬ್ರಹ್ಮಾಸ್ತ್ರ: ಭಾಗ 2’ ಚಿತ್ರದಲ್ಲಿ ಜೋಡಿಯಾಗಿ ನಟಿಸುತ್ತಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ರಾಕಿಂಗ್ ಸ್ಟಾರ್ ಯಶ್ ಹಾಗೂ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಅಮೆರಿಕದಲ್ಲಿ ‘ರಾಮಾಯಣ’ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಆ ವೇಳೆ ‘ಬ್ರಹ್ಮಾಸ್ತ್ರ: ಭಾಗ 2’ ಚಿತ್ರಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಈ ಚಿತ್ರದಲ್ಲಿ ರಣಬೀರ್ ಮತ್ತು ದೀಪಿಕಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ ಎಂದು ನಮಿತ್ ಮಲ್ಹೋತ್ರಾ ಹೇಳಿಕೊಂಡಿದ್ದಾರೆ.

ಇನ್ನು, ರಣಬೀರ್ ಮತ್ತು ದೀಪಿಕಾ ಅವರು ‘ಬಚ್ನಾ ಏ ಹಸೀನೋ’, ‘ಯೇ ಜವಾನಿ ಹೈ ದಿವಾನಿ’, ‘ತಮಾಷಾ’ ಚಿತ್ರದಲ್ಲಿ ಜೋಡಿಯಾಗಿ ನಟಿಸಿ ಪ್ರೇಕ್ಷಕರನ್ನು ಸೆಳೆದಿದ್ದರು. ನಂತರ ಈ ಜೋಡಿ ಮದುವೆಯಾಗುತ್ತಿದೆ ಎನ್ನುವ ವದಂತಿಗಳು ಹರಿದಾಡಿದ್ದವು. ಆ ಬಳಿಕ, ಇವರಿಬ್ಬರೂ ಒಟ್ಟಾಗಿ ತೆರೆ ಮೇಲೆ ಕಾಣಿಸಿಕೊಂಡಿರಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-4-1762159872

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.