ನವದೆಹಲಿ: ಬಾಲಿವುಡ್ ಸೂಪರ್ಸ್ಟಾರ್ ರಣಬೀರ್ ಕಪೂರ್ ಹಾಗೂ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ‘ಅನಿಮಲ್’ ಸಿನಿಮಾದ ಚಿತ್ರೀಕರಣಕ್ಕಾಗಿ ಹಿಮಾಚಲ ಪ್ರದೇಶದ ಮನಾಲಿ ತಲುಪಿದ್ದಾರೆ.

ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ಅವರು ತಮ್ಮ ಅಭಿಮಾನಿಗಳೊಂದಿಗೆ ಪೋಸ್ ನೀಡಿರುವ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಹಿಮಾಚಲದ ಸಾಂಪ್ರದಾಯಿಕ ಟೋಪಿಯನ್ನು ಧರಿಸಿರುವ ಈ ಇಬ್ಬರು ತಾರೆಯರಿಗೆ ಸ್ವಾಗತ ಕೋರಿರುವುದನ್ನು ಚಿತ್ರಗಳಲ್ಲಿ ಕಾಣಬಹುದು.

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮದುವೆ ಕಳೆದ ವಾರ ನೆರವೇರಿತ್ತು. ಮುಂಬೈನ ಬಾಂದ್ರಾದಲ್ಲಿರುವ ರಣಬೀರ್ ಅವರ 'ವಾಸ್ತು' ನಿವಾಸದಲ್ಲಿ ಕುಟುಂಬದ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದರು.

‘ಅರ್ಜುನ್ ರೆಡ್ಡಿ’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ‘ಅನಿಮಲ್’ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಬಾಬಿ ಡಿಯೋಲ್ ಮತ್ತು ಅನಿಲ್ ಕಪೂರ್ ಸಹ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರವು ಆಗಸ್ಟ್ 11, 2023 ರಂದು ಬಿಡುಗಡೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.