ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಾಖಾಹಾರಿ’ಯಾದ ರಂಗಾಯಣ ರಘು 

Published 1 ಸೆಪ್ಟೆಂಬರ್ 2023, 19:28 IST
Last Updated 1 ಸೆಪ್ಟೆಂಬರ್ 2023, 19:28 IST
ಅಕ್ಷರ ಗಾತ್ರ

ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಶಾಖಾಹಾರಿ’ ಚಿತ್ರದ ಶೀರ್ಷಿಕೆ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ‘ಕೀಳಂಬಿ ಮೀಡಿಯಾ ಲ್ಯಾಬ್’ ಮೂಲಕ ರಾಜೇಶ್ ಕೀಳಂಬಿ ಹಾಗೂ ರಂಜಿನಿ ಪ್ರಸನ್ನ ಜೊತೆಗೂಡಿ ನಿರ್ಮಿಸಿರುವ ಚಿತ್ರಕ್ಕೆ ಸಂದೀಪ್ ಸುಂಕದ್ ಆ್ಯಕ್ಷನ್‌–ಕಟ್ ಹೇಳಿದ್ದಾರೆ.

ಹೋಟೆಲ್ ಬಾಣಸಿಗನಾಗಿ ರಂಗಾಯಣ ರಘು ಕಾಣಿಸಿಕೊಂಡಿದ್ದು, ನಿರ್ದೇಶಕ ಯೋಗರಾಜ್‌ ಭಟ್‌ ಬೆಂಕಿಯ ಮೂಲಕ ವಿಶಿಷ್ಟ ರೀತಿಯಲ್ಲಿ ಶೀರ್ಷಿಕೆ ಅನಾವರಣಗೊಳಿಸಿ ಶುಭ ಕೋರಿದರು.

‘ತೀರ್ಥಹಳ್ಳಿಯ ಊರೊಂದರಲ್ಲಿ ನಡೆಯುವ ನಿಗೂಢ ಘಟನೆಯ ಸುತ್ತ ಸಾಗುವ ಕಥೆ ಇದಾಗಿದ್ದು, ಎಸ್.ಐ ಆಗಿ ಗೋಪಾಲಕೃಷ್ಣ ದೇಶಪಾಂಡೆ ಮತ್ತು ಸುಜಯ್ ಶಾಸ್ತ್ರಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಹರಿಣಿ, ಪ್ರತಿಮಾ ನಾಯಕ್ ಮತ್ತಿತರು ಚಿತ್ರದಲ್ಲಿದ್ದಾರೆ. ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ’ ಎಂದು ಮಾಹಿತಿ ನೀಡಿದರು ನಿರ್ದೇಶಕ ಸಂದೀಪ್. 

ವಿಶ್ವಜಿತ್ ರಾವ್ ಛಾಯಾಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಮಯೂರ್ ಅಂಬೆಕಲ್ಲು ಸಂಗೀತ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT