ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಂಗ ಸಮುದ್ರ’ದಿಂದ ಬಂದ ರಘು

Published 15 ಜನವರಿ 2024, 19:07 IST
Last Updated 15 ಜನವರಿ 2024, 19:07 IST
ಅಕ್ಷರ ಗಾತ್ರ

ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ರಂಗ ಸಮುದ್ರ’ ಚಿತ್ರದ ಟ್ರೇಲರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಟ ರಾಘವೇಂದ್ರ ರಾಜಕುಮಾರ್ ಚಿತ್ರದ ಟ್ರೇಲರ್‌ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

ರಾಜಕುಮಾರ್ ಅಸ್ಕಿ ನಿರ್ದೇಶನದ ಚಿತ್ರಕ್ಕೆ ಹೊಯ್ಸಳ ಕೊಣನೂರು ಬಂಡವಾಳ ಹೂಡಿದ್ದಾರೆ. ‘ಜನಪದ ಸೊಗಡಿನ ಈ ಸಿನಿಮಾ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಚಿತ್ರೀಕರಣಗೊಂಡಿದೆ. ಪುನೀತ್ ರಾಜಕುಮಾರ್ ಅವರು ಈ ಚಿತ್ರದಲ್ಲಿ ನಟಿಸಬೇಕಿತ್ತು, ಆದರೆ ಆಗಲಿಲ್ಲ. ಈಗ ಅದೇ ಮನೆಯ ರಾಘವೇಂದ್ರ ರಾಜಕುಮಾರ್ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಜ.19ರಂದು ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು ರಂಗಾಯಣ ರಘು.

‘‘ರಂಗ ಸಮುದ್ರ’ ಊರಿನ ಹೆಸರು. ಈ ಚಿತ್ರವನ್ನು ಮೊದಲು ನೋಡಿದವರು ಪವರ್ ಸ್ಟಾರ್ ಪುನೀತ್ ರಾಜಕುಮಾರ್. ಚಿತ್ರವನ್ನು ನೋಡಿ, ಅವರು ಜಿಲ್ಲಾಧಿಕಾರಿ ಪಾತ್ರದಲ್ಲಿ(ಅತಿಥಿ ಪಾತ್ರದಲ್ಲಿ) ನಟಿಸುವುದಾಗಿ ಹೇಳಿದ್ದರು. ಆದರೆ ವಿಧಿಯಾಟದಿಂದ ಅದು ಆಗಲಿಲ್ಲ’ ಎಂದು ನಿರ್ದೇಶಕ ರಾಜಕುಮಾರ್ ಅಸ್ಕಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT