ಗುರುವಾರ , ಅಕ್ಟೋಬರ್ 6, 2022
26 °C

ನಗ್ನ ಚಿತ್ರ ವಿವಾದ: ಆ.22ರಂದು ಮುಂಬೈ ಪೊಲೀಸರಿಂದ ನಟ ರಣವೀರ್ ಸಿಂಗ್‌ ವಿಚಾರಣೆ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಸಾಮಾಜಿಕ ಮಾಧ್ಯಮದಲ್ಲಿ ನಗ್ನ ಚಿತ್ರಗಳನ್ನು ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಣವೀರ್ ಸಿಂಗ್ ಅವರನ್ನು ಮುಂಬೈ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ.

ಆ. 22 ರಂದು ವಿಚಾರಣೆಗೆ ಹಾಜರಾಗುವಂತೆ ರಣವೀರ್‌ ಸಿಂಗ್‌ಗೆ ನೋಟಿಸ್‌ ನೀಡಲಾಗಿದೆ.

ಮಂಬೈ ಮೂಲದ ಸರ್ಕಾರೇತರ ಸಂಸ್ಥೆಯೊಂದು (ಎನ್‌ಜಿಒ) ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ನಗ್ನ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಮಹಿಳೆಯರ ಭಾವನೆಗಳಿಗೆ ರಣವೀರ್‌ ಸಿಂಗ್‌ ಧಕ್ಕೆ ತಂದಿದ್ದಾರೆ ಎಂದು ಎನ್‌ಜಿಒ ಆರೋಪಿಸಿದೆ.

ರಣವೀರ್ ಸಿಂಗ್ ಇತ್ತೀಚೆಗೆ ನಿಯತಕಾಲಿಕೆಯೊಂದರ ಫೋಟೊಶೂಟ್‌ಗೆ ಬೆತ್ತಲೆಯಾಗಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ತಮ್ಮ ನಗ್ನ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿಯೂ ಪ್ರಕಟಿಸಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು