ನಾವು ಗೆದ್ದಿದ್ದೇವೆ ಅಮ್ಮ: ತಾಯಿಯ ಫೋಟೊ ಹಂಚಿಕೊಂಡ ‘83’ ನಾಯಕ ರಣವೀರ್ ಸಿಂಗ್

ಮುಂಬೈ: '83' ಚಿತ್ರವು ಇಂದು(ಶುಕ್ರವಾರ) ಬಿಡುಗಡೆಯಾಗಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಣವೀರ್ ಸಿಂಗ್ ಅವರು ತಮ್ಮ ತಾಯಿ ಅಂಜು ಭವ್ನಾನಿ ಅವರ ಫೋಟೊವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ಈ ಫೋಟೊದಲ್ಲಿ ಅಂಜು ಭವ್ನಾನಿ ಅವರು 1983ರ ವಿಶ್ವಕಪ್ನ ಟ್ರೋಫಿಯನ್ನು ಹಿಡಿದುಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.
ಫೋಟೊದೊಂದಿಗೆ ‘ನಾವು ಗೆದ್ದಿದ್ದೇವೆ ಅಮ್ಮ’ ಎಂದು ರಣವೀರ್ ಸಿಂಗ್ ಬರೆದುಕೊಂಡಿದ್ದಾರೆ.
ಕಪಿಲ್ ದೇವ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ರೋಚಕ ಕಥೆಯನ್ನು ‘83‘ ಹೊಂದಿದೆ. ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಚಿತ್ರವು ತೆರೆಕಂಡಿದೆ.
ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಹಾಗೂ ಕಪಿಲ್ ದೇವ್ ಅವರ ಪತ್ನಿ ರೋಮಿ ದೇವ್ ಪಾತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.