ಗುರುವಾರ , ಜುಲೈ 7, 2022
20 °C

ನೆಟ್‌ಫ್ಲಿಕ್ಸ್ ಮತ್ತು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ‘83‘ ಸಿನಿಮಾ ಬಿಡುಗಡೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ಟೀಮ್ ಇಂಡಿಯಾ ಚೊಚ್ಚಲ ಕ್ರಿಕೆಟ್ ವಿಶ್ವಕಪ್ ಗೆಲ್ಲುವ ಕಥೆಯನ್ನು ಒಳಗೊಂಡ ‘83‘ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಿದೆ.

ಮಾರ್ಚ್ 20ರಂದು 83 ಸಿನಿಮಾ ಸ್ಟಾರ್ ಗೋಲ್ಡ್ ವಾಹಿನಿಯಲ್ಲಿ ಪ್ರದರ್ಶಿಲ್ಪಟ್ಟಿತ್ತು.

ಅದಾದ ಬಳಿಕ, ಡಿಸ್ನಿ+ ಹಾಟ್‌ಸ್ಟಾರ್ ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾ ಒಟಿಟಿ ವೇದಿಕೆಯಲ್ಲಿ ಪ್ರದರ್ಶಿಲ್ಪಡುತ್ತಿದೆ.

ಕಳೆದ ವರ್ಷ ಡಿಸೆಂಬರ್ 24ರಂದು ಬಿಡುಗಡೆಯಾಗಿದ್ದ ಈ ಚಿತ್ರ, ಕ್ರಿಕೆಟ್ ಪ್ರಿಯರ ಮನಗೆದ್ದಿತ್ತು.

ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಕುರಿತು ಡಿಸ್ನಿ+ ಹಾಟ್‌ಸ್ಟಾರ್ ಟ್ವೀಟ್ ಮಾಡಿದೆ.

83 ಸಿನಿಮಾ ಹಿಂದಿ, ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿ ಪ್ರಸಾರವಾಗುತ್ತಿದೆ.

ಚಿತ್ರದಲ್ಲಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ನಾಯಕ ಮತ್ತು ನಾಯಕಿಯಾಗಿ ಅಭಿನಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು