ಹೈದರಾಬಾದ್: ‘ನ್ಯಾಷನಲ್ ಕ್ರಶ್’ ಎಂದೇ ಖ್ಯಾತರಾಗಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ನಟ ವಿಜಯ್ ದೇವರಕೊಂಡ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಹೈದರಾಬಾದ್ನಲ್ಲಿರುವ ವಿಜಯ್ ಅವರ ನಿವಾಸದಲ್ಲಿ ನಿಶ್ಚಿತಾರ್ಥ ನಡೆದಿದ್ದು, ಕಾರ್ಯಕ್ರಮದಲ್ಲಿ ಎರಡು ಕುಟುಂಬದವರಷ್ಟೇ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

2026ರ ಫೆಬ್ರುವರಿಯಲ್ಲಿ ರಶ್ಮಿಕಾ–ವಿಜಯ್ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡುವ ಸಾಧ್ಯತೆ ಇದೆ ಎಂದು ಎನ್ಡಿಟಿವಿ ವರದಿ ಮಾಡಿದೆ.

‘ಗೀತಾ ಗೋವಿಂದಂ’, ‘ಡಿಯರ್ ಕಾಮ್ರೆಡ್’ ಚಿತ್ರಗಳಲ್ಲಿ ಒಟ್ಟಿಗೆ ನಟಿಸಿರುವ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಪ್ರೀತಿಯ ಬಲೆಗೆ ಬಿದ್ದಿದ್ದಾರೆ ಎಂಬ ವದಂತಿ ಬಹಳ ಕಾಲದಿಂದಲೂ ಇತ್ತು.

ಜೂನ್ನಲ್ಲಿ ರಶ್ಮಿಕಾ ಹಾಗೂ ವಿಜಯ್ ಒಟ್ಟಿಗೆ ಮುಂಬೈಗೆ ಆಗಮಿಸಿದಾಗ ಅವರ ಡೇಟಿಂಗ್ ಬಗ್ಗೆ ಹೆಚ್ಚಿನ ಸುದ್ದಿಗಳು ಹರಿದಾಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.