ಕಳೆದ ಕೆಲವು ದಿನಗಳ ಹಿಂದೆ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ವಿವಾಹವಾಗಿದ್ದರು. ಈ ಜೋಡಿಯು ಉದಯಪುರದಲ್ಲಿ ಆತ್ಮೀಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಇದೀಗ ಈ ಜೋಡಿಯು ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದಾರೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ದಂಪತಿಯು ಥೈಲ್ಯಾಂಡ್ ಪ್ರವಾಸದಲ್ಲಿದ್ದು, ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಅಭಿಮಾನಿಗಳು ಫೊಟೊಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವಿವಾಹದ ನಂತರ ರಶ್ಮಿಕಾ ಹಾಗೂ ವಿಜಯ್ ಅವರ ಮೊದಲ ಪ್ರವಾಸ ಇದಾಗಿದೆ.

ರಶ್ಮಿಕಾ ಹಾಗೂ ದೇವರಕೊಂಡ ಜೋಡಿಯು ಮೆಟ್ಟಿಲುಗಳ ಮೇಲೆ ನಿಂತು ಏಕಾಂತದಲ್ಲಿರುವ ಚಿತ್ರವು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನಲ್ಲಿ ಹರಿದಾಡುತ್ತಿದೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ದೇವರಕೊಂಡ ಹಾಗೂ ರಶ್ಮಿಕಾ ಕೊಹ್ ಸಮುಯಿಯಲ್ಲಿರುವ ಖಾಸಗಿ ಏರ್ಬಿಎನ್ಬಿ ವಿಲ್ಲಾದಲ್ಲಿ ತಂಗಿದ್ದಾರೆ. ಐಷಾರಾಮಿ ರೆಸಾರ್ಟ್ಗಳಿಗಿಂತಲೂ ಏಕಾಂತದಿಂದ ಕೂಡಿರುವ ವಿಲ್ಲಾಗಳನ್ನು ಆರಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ವಿಜಯ್ ದೇವರಕೊಂಡ ಇತ್ತೀಚೆಗೆ ತಮ್ಮ ಪುಟ್ಟ ಅಭಿಮಾನಿಯನ್ನು ಮನೆಗೆ ಆಹ್ವಾನಿಸಿದ್ದು, ನೆಟ್ಟಿಗರಿಂದ ಮೆಚ್ಚುಗೆ ಪಡೆದುಕೊಂಡಿತ್ತು.

ರಾಹುಲ್ ಸಂಕೃತ್ಯಾನ್ ನಿರ್ದೇಶನದ ‘ರಣಬಾಲಿ’ ಚಿತ್ರದಲ್ಲಿ ವಿಜಯ್ ಮತ್ತು ರಶ್ಮಿಕಾ ನಟಿಸುತ್ತಿದ್ದು, ಸಿನಿಮಾ ಯಶಸ್ವಿಯಾಗುವ ನಿರೀಕ್ಷೆ ಹುಟ್ಟಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.