ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ಇಂದು (ಏಪ್ರಿಲ್ 5) ತಮ್ಮ 30ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ವಿಜಯ್ ದೇವರಕೊಂಡ ಅವರನ್ನು ವಿವಾಹವಾದ ಬಳಿಕ ಇದು ಅವರ ಮೊದಲ ಹುಟ್ಟುಹಬ್ಬವಾಗಿದೆ.

ಹುಟ್ಟುಹಬ್ಬದ ಪ್ರಯುಕ್ತ ವಿಜಯ್ ದೇವರಕೊಂಡ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೊವೊಂದನ್ನು ಹಂಚಿಕೊಳ್ಳುವ ಮೂಲಕ ವಿಶ್ ಮಾಡಿದ್ದಾರೆ.

ರಶ್ಮಿಕಾ ಅವರ ಮದುವೆಯಾದ ಬಳಿಕ ಇದೇ ಮೊದಲ ಬಾರಿಗೆ ವಿಜಯ್ ದೇವರಕೊಂಡ ಅವರ ಜೊತೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬಕ್ಕೆ ವಿಭಿನ್ನವಾಗಿ ಶುಭಕೋರಿರುವ ದೇವರಕೊಂಡ, ಸಾಮಾಜಿಕ ಮಾಧ್ಯಮದಲ್ಲಿ ’ಐ ಲವ್ ಯು ಜಯ್ಯಮ್ಮ’ ಎಂದು ಬರೆದುಕೊಂಡಿದ್ದಾರೆ.

ದೇವರಕೊಂಡ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಮುಂಬರುವ ‘ರಣಬಾಲಿ’ ಸಿನಿಮಾದಲ್ಲಿ ರಶ್ಮಿಕಾ ಅವರ ಮೇಕಿಂಗ್ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿಕಾ ಅವರು ಜಯಮ್ಮನ ಪಾತ್ರದಲ್ಲಿ ನಟಿಸಿದ್ದಾರೆ. ಹಾಗಾಗಿ ರಶ್ಮಿಕಾ ಅವರಿಗೆ ಜಯಮ್ಮ ಎಂದೇ ಶುಭಕೋರಿದ್ದಾರೆ.

ಸದ್ಯ ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ರಾಹುಲ್ ಸಂಕ್ರಿತ್ಯಾನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ರಣಬಾಲಿ ಸಿನಿಮಾ ಸೆಪ್ಟೆಂಬರ್ 11ರಂದು ಬಿಡುಗಡೆಯಾಗುವ ನಿರೀಕ್ಷೆ ಇದೆ. ಸಿನಿಮಾದಲ್ಲಿ ಜಯಮ್ಮ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ, ಸರ್ ಥಿಯೋಡರ್ ಹೆಕ್ಟರ್ ಪಾತ್ರದಲ್ಲಿ ಅರ್ನಾಲ್ಡ್ ವೊಣ್ಣೂ ಕಾಣಿಸಿಕೊಂಡಿದ್ದಾರೆ.

ಈ ಸಿನಿಮಾ 19ನೇ ಶತಮಾನದಲ್ಲಿ ಬ್ರಿಟಿಷರ ದೌರ್ಜನ್ಯದ ಮೇಲೆ ಬೆಳಕು ಚೆಲ್ಲುವುದಲ್ಲದೆ, ಭಾರತದಲ್ಲಿ ನಡೆದ ಆರ್ಥಿಕ ಶೋಷಣೆಯ ಕಥೆಯನ್ನು ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.