ರಶ್ಮಿಕಾ ಮಂದಣ್ಣ, ದೀಕ್ಷಿತ್ ಶೆಟ್ಟಿ ಜೋಡಿಯಾಗಿ ನಟಿಸಿರುವ ‘ದಿ ಗರ್ಲ್ಫ್ರೆಂಡ್’ ಚಿತ್ರ ನವೆಂಬರ್ 7ರಂದು ತೆರೆಗೆ ಬರಲಿದೆ. ರಾಹುಲ್ ರವೀಂದ್ರನ್ ನಿರ್ದೇಶನದ ತೆಲುಗು ಚಿತ್ರ ಪ್ರೇಮಕಥೆಯನ್ನು ಹೊಂದಿದೆ.

‘ಗೀತಾ ಆರ್ಟ್ಸ್’ ಹಾಗೂ ‘ಧೀರಜ್ ಮೊಗಿಲಿನೇನಿ ಎಂಟರ್ಟೈನ್ಮೆಂಟ್’ ಸಂಸ್ಥೆಗಳು ಒಟ್ಟಾಗಿ ನಿರ್ಮಾಣ ಮಾಡಿವೆ. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಅವರು ಈ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದ್ದಾರೆ.

‘ಛಾವಾ’ ಮತ್ತು ‘ಕುಬೇರ’ ಚಿತ್ರಗಳ ಬಳಿಕ ರಶ್ಮಿಕಾ ಮಂದಣ್ಣ ನಟನೆಯ ಬಹು ನಿರೀಕ್ಷಿತ ಚಿತ್ರ ಇದಾಗಿದೆ. ಚಿತ್ರದ ಹಾಡು ಈಗಾಗಲೇ ಬಿಡುಗಡೆಗೊಂಡಿದ್ದು, ಒಂದು ಭಿನ್ನ ಪ್ರೇಮಕಥಾಹಂದರದ ಚಿತ್ರವೆಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

‘ದಿಯಾ’ ಸಿನಿಮಾದ ಮೂಲಕ ಜನಪ್ರಿಯತೆಯನ್ನು ಪಡೆದುಕೊಂಡ ನಟ ದೀಕ್ಷಿತ್ ‘ದಸರಾ’ ಸಿನಿಮಾ ಮೂಲಕ ತೆಲುಗಿನಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ಇದೀಗ ನಾಯಕನಾಗಿ ಈ ಚಿತ್ರದ ಮೂಲಕ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳ ಭಾಷೆಗಳಲ್ಲಿಯೂ ಚಿತ್ರ ತೆರೆ ಕಾಣಲಿದೆ.

ಹೇಶಮ್ ಅಬ್ದುಲ್ ವಹಾಬ್ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಕೃಷ್ಣನ್ ವಸಂತ್ ಛಾಯಾಚಿತ್ರಗ್ರಹಣ, ಚೋಟಾ ಕೆ ಪ್ರಸಾದ್ ಸಂಕಲನ ಸಿನಿಮಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.