ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಕಿರಿಕ್ ಪಾರ್ಟಿ ಹುಡುಗಿಗೆ ಎರಡು ಕೋಟಿ ಇನ್‌ಸ್ಟಾಗ್ರಾಂ ಫಾಲೋವರ್ಸ್!

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Rashmika Mandanna Instagram Post Screengrab

ಬೆಂಗಳೂರು: ಕಿರಿಕ್ ಪಾರ್ಟಿ ಹುಡುಗಿ ಎಂದೇ ಜನಪ್ರಿಯತೆ ಗಳಿಸಿರುವ ನಟಿ, ಕೊಡಗು ಮೂಲದ ರಶ್ಮಿಕಾ ಮಂದಣ್ಣ ಇನ್‌ಸ್ಟಾಗ್ರಾಂನಲ್ಲಿ ಎರಡು ಕೋಟಿ ಹಿಂಬಾಲಕರನ್ನು ಹೊಂದುವ ಮೂಲಕ ಸುದ್ದಿಯಾಗಿದ್ದಾರೆ.

ಈ ವಿಚಾರವನ್ನು ಸ್ವತಃ ರಶ್ಮಿಕಾ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಸಂಭ್ರಮಿಸಿದ್ದಾರೆ.

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಬಳಿಕ ಇನ್‌ಸ್ಟಾಗ್ರಾಂನಲ್ಲಿ ಗರಿಷ್ಠ ಫಾಲೋವರ್ಸ್ ಹೊಂದಿರುವ ನಟಿಯರ ಪೈಕಿ ರಶ್ಮಿಕಾ ಮುಂಚೂಣಿಯಲ್ಲಿದ್ದಾರೆ.

ದೀಪಿಕಾ ಪಡುಕೋಣೆ 5.9 ಕೋಟಿ ಇನ್‌ಸ್ಟಾಗ್ರಾಂ ಫಾಲೋವರ್ಸ್ ಹೊಂದಿದ್ದು, ಸಮಂತಾ 1.8 ಕೋಟಿ ಮತ್ತು ಪೂಜಾ ಹೆಗ್ಡೆ 1.48 ಕೋಟಿ ಇನ್‌ಸ್ಟಾ ಫಾಲೋವರ್ಸ್ ಹೊಂದಿದ್ದಾರೆ.

ರಶ್ಮಿಕಾ ದಕ್ಷಿಣ ಚಿತ್ರರಂಗ ಮಾತ್ರವಲ್ಲದೆ, ಬಾಲಿವುಡ್‌ನಲ್ಲೂ ತೊಡಗಿಸಿಕೊಂಡಿದ್ದಾರೆ. ತಮಿಳಿನಲ್ಲಿ ಕಾರ್ತಿ ಜತೆಗೆ ಸುಲ್ತಾನ್, ತೆಲುಗಿನಲ್ಲಿ ಅಲ್ಲು ಅರ್ಜುನ್ ಜತೆಗೆ ಪುಷ್ಪಾ ಮತ್ತು ಬಾಲಿವುಡ್‌ನಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಜತೆಗೆ ಮಿಷನ್ ಮಜ್ನು ಚಿತ್ರದಲ್ಲಿ ಕೂಡ ರಶ್ಮಿಕಾ ಕಾಣಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು