ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಡುಡುಗೆಯಲ್ಲಿ ರಶ್ಮಿಕಾ! ನೀವು ಉರ್ಫಿ 2.0 ಎಂದು ಟ್ರೋಲ್‌ ಮಾಡಿದ ನೆಟ್ಟಿಗರು

Last Updated 27 ಫೆಬ್ರವರಿ 2023, 7:43 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡತಿ ರಶ್ಮಿಕಾ ಮಂದಣ್ಣ ಅವರು ಮತ್ತೆ ನೆಟ್ಟಿಗರ ಟ್ರೋಲ್‌ಗೆ ಒಳಗಾಗಿದ್ದಾರೆ. ಅವರು ತುಂಡುಡುಗೆಯಲ್ಲಿ ಕಾಣಿಸಿಕೊಂಡಿದ್ದಕ್ಕೆ ನೀವು, ಉರ್ಫಿ ಜಾವೇದ್‌ 2.0 ಎಂದು ನೆಟ್ಟಿಗರು ಟ್ರೋಲ್‌ ಮಾಡಿದ್ದಾರೆ.

ಹೌದು, ನಟಿ ರಶ್ಮಿಕಾ ಇತ್ತೀಚೆಗೆ ಜೀ ಸಿನಿಮಾ ಅವಾರ್ಡ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಕಪ್ಪುಡುಗೆ ತೊಟ್ಟು ಸಖತ್ ಬೋಲ್ಡ್ ಲುಕ್ನಲ್ಲಿ ಕಾಣಿಸಿಕೊಂಡಿದ್ದರು. ಅವರ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದ್ದವು. ನೆಟ್ಟಿಗರು ಅವರ ಉಡುಗೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಉದ್ದನೆಯ ಗೌನ್‌ ಇದ್ದ ಕಪ್ಪು ಬಣ್ಣದ ಚಿಕ್ಕ ಉಡುಪು ಹಾಕಿ ಬಂದಿದ್ದರು. ಈ ಕಾರಣಕ್ಕೆ ಅನೇಕರು ಅವರನ್ನು ಟ್ರೋಲ್ ಮಾಡಿದ್ದಾರೆ.

‘ದೇಹ ಕಾಣುವ ರೀತಿಯಲ್ಲಿ ಏಕೆ ಬಟ್ಟೆ ಹಾಕಿ ಬರಬೇಕು? ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ನಾವು ನಿಮ್ಮನ್ನು ಇಂತಹ ಉಡುಗೆಯಲ್ಲಿ ನೋಡುತ್ತೇವೆ ಎಂದು ನಿರೀಕ್ಷೆ ಮಾಡಿರಲಿಲ್ಲ ಎಂದು ಕೆಲವರು ಕಮೆಂಟ್‌ ಮಾಡಿದ್ದಾರೆ.

ಈ ರೀತಿ ಉಡುಗೆ ಹಾಕುವುದು ತಪ್ಪು ಎಂದು ಕೆಲವರು ಹೇಳಿದರೆ, ನೀವು ಹಾಟ್‌ ನಟಿ ಉರ್ಫಿ ಜಾವೇದ್‌ 2.0 ಎಂದು ಮತ್ತೆ ಕೆಲವರು ಹೇಳಿದ್ದಾರೆ.

ನೀವು ಕಪ್ಪು ಬಟ್ಟೆಯಲ್ಲಿ ಬಹಳ ಚೆನ್ನಾಗಿ ಕಾಣುತ್ತಿದ್ದೀರಾ ಎಂದು ಕೆಲ ಅಭಿಮಾನಿಗಳು ಹೇಳಿದ್ದಾರೆ. ಇದ್ಯಾವುದಕ್ಕೂ ರಶ್ಮಿಕಾ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಹಾಗೇ ಟ್ರೋಲ್‌ ಮಾಡುತ್ತಿರುವವರಿಗೆ ಯಾವುದೇ ಕಮೆಂಟ್‌ಗಳನ್ನು ಹಾಕಿಲ್ಲ.

ಸದ್ಯ ರಶ್ಮಿಕಾ ‘ಅನಿಮಲ್’ ಹಾಗೂ ‘ಪುಷ್ಪ 2’ ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT