ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಶ್ಮಿಕಾ ಮಂದಣ್ಣ ಇನ್‌ಸ್ಟಾಗ್ರಾಂ ಫಾಲೋವರ್ಸ್‌ಗಳ ಸಂಖ್ಯೆ 1.90 ಕೋಟಿ!

ಅಕ್ಷರ ಗಾತ್ರ

ಕನ್ನಡದಲ್ಲಿ ಕಿರಿಕ್‌ ಪಾರ್ಟಿ ಚಿತ್ರದ ಮೂಲಕ ಸಿನಿ ಜರ್ನಿ ಶುರು ಮಾಡಿದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ದಕ್ಷಿಣ ಭಾರತದಲ್ಲಿ ಬಹುಬೇಡಿಕೆಯ ನಟಿ. ಟಾಲಿವುಡ್‌ನಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿರುವ ಅವರು ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.

ಇದೀಗ ಅವರ ಇನ್‌ಸ್ಟಾಗ್ರಾಂ ಫಾಲೋವರ್ಸ್‌ಗಳ ಸಂಖ್ಯೆ 1.90 ಕೋಟಿ ಆಗಿದೆ. ಈ ಬಗ್ಗೆ ವಿಡಿಯೊ ಪೋಸ್ಟ್‌ ಮಾಡಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ಹೇಳಿದ್ದಾರೆ.

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಖ್ಯಾತಿಯನ್ನು ಅವರು ಪಡೆದಿದ್ದಾರೆ. ಟ್ವಿಟರ್‌, ಫೇಸ್‌ಬುಕ್‌ನಲ್ಲಿ ಲಕ್ಷಾಂತರ ಅಭಿಮಾನಿಗಳು ರಶ್ಮಿಕಾರನ್ನು ಫಾಲೊ ಮಾಡುತ್ತಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ಕೇವಲ 367 ಪೋಸ್ಟ್‌ಗಳನ್ನು ಮಾತ್ರ ಪ್ರಕಟಿಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ 2 ಕೋಟಿ ಫಾಲೋವರ್ಸ್‌ಗಳನ್ನು ಪಡೆಯುವುದು ಖಚಿತ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಪ್ರಸ್ತುತ ಮಿಷನ್‌ ಮಜ್ನು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದು ಬಾಲಿವುಡ್‌ನಲ್ಲಿ ಅವರ ಚೊಚ್ಚಲ ಚಿತ್ರವಾಗಿದೆ. ಸುಕುಮಾರ್ ನಿರ್ದೇಶನದ ಅಲು ಅರ್ಜುನ್ ಅವರ ಪುಷ್ಪ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ. ಬಾಲಿವುಡ್‌ನ ಮತ್ತೊಂದು ಚಿತ್ರ ‘ವಿದಾಯ‘ದಲ್ಲೂ ನಟಿಸಲು ರಶ್ಮಿಕಾ ಕಾಲ್‌ಶೀಟ್‌ ನೀಡಿದ್ದಾರೆ. ಇದರಲ್ಲಿ ಅಮಿತಾಬ್ ಬಚ್ಚನ್ ಅವರೊಂದಿಗೆ ತೆರೆಹಂಚಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT