ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಟ್ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ: ಎದೆಬಡಿತ ಹೆಚ್ಚಿಸಿದ ‘ನ್ಯಾಷನಲ್‌ ಕ್ರಶ್’

ಅಕ್ಷರ ಗಾತ್ರ

ನವದೆಹಲಿ: ಬಹುಭಾಷಾ ನಟಿ, ‘ನ್ಯಾಷನಲ್‌ ಕ್ರಶ್‌’ ರಶ್ಮಿಕಾ ಮಂದಣ್ಣ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಸದಾ ಸಕ್ರಿಯರಾಗಿರುವ ರಶ್ಮಿಕಾ, ಪ್ರವಾಸ, ಹಬ್ಬ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ಕ್ಲಿಕ್ಕಿಸಿದ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ಗುಲಾಬಿ ಬಣ್ಣದ ಸೀರೆಯಲ್ಲಿ ಸಖತ್ ಹಾಟ್ ಆಗಿ ಕಾಣಿಸುವ ಮೂಲಕ ಕ್ಯಾಮೆರಾಗೆ ಪೋಸ್‌ ನೀಡಿರುವ ಫೋಟೊಗಳನ್ನು ರಶ್ಮಿಕಾ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರಕ್ಕೆ ಸೆಲೆಬ್ರಿಟಿಗಳು ಸೇರಿದಂತೆ ಅಭಿಮಾನಿಗಳು ಹೃದಯ ಎಮೋಜಿಯೊಂದಿಗೆ ಕಾಮೆಂಟ್ ಮಾಡಿದ್ದಾರೆ.

ರಶ್ಮಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ. ಫಿಟ್‌ನೆಸ್‌ಗೆ ಹೆಚ್ಚು ಒತ್ತು ನೀಡುವ ಅವರು ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿರುವ ವಿಡಿಯೊ ಮತ್ತು ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇತ್ತೀಚಿಗೆ ಸುಕುಮಾರ್ ನಿರ್ದೇಶನದಲ್ಲಿ ಮೂಡಿಬಂದ ‘ಪುಷ್ಪ’ ಸಿನಿಮಾದಲ್ಲಿ ನಟ ಅಲ್ಲು ಅರ್ಜುನ್‌ ಅವರೊಂದಿಗೆ ರಶ್ಮಿಕಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

2016ರಲ್ಲಿ ತೆರೆಕಂಡ ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದ ಮೂಲಕ ಸಿನಿಪಯಣವನ್ನು ಆರಂಭಿಸಿದ್ದ ರಶ್ಮಿಕಾ, ನಂತರ ಟಾಲಿವುಡ್‌ನಲ್ಲಿ ಮಿಂಚಿದ್ದರು. ‘ಗೀತಾ ಗೋವಿಂದಂ’, ‘ದೇವದಾಸ್‌’, ‘ಸರಿಲೇರು ನೀಕೆವ್ವರು’, ‘ಡಿಯರ್‌ ಕಾಮ್ರೇಡ್‌’ ‘ಪುಷ್ಪ’ ಹೀಗೆ ತೆಲುಗಿನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡ ರಶ್ಮಿಕಾ, ಬಾಲಿವುಡ್‌ಗೂ ಜಿಗಿದಿದ್ದರು. ಬಾಲಿವುಡ್ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಜೊತೆ ‘ಗುಡ್‌ಬೈ’ನಲ್ಲಿ ಹಾಗೂ ನಟ ಸಿದ್ಧಾರ್ಥ ಮಲ್ಹೋತ್ರಾ ಅಭಿನಯದ ‘ಮಿಷನ್ ಮಜ್ನು’ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಅಭಿನಯಿಸಿದ್ದಾರೆ.

ಸದ್ಯ ಹನು ರಾಘವಪುಡಿ ನಿರ್ದೇಶನದ ಸಿನಿಮಾದಲ್ಲಿ ‘ಆಫ್ರೀನ್‌’ ಎಂಬ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ ತಮಿಳಿನ ಖ್ಯಾತ ನಟ ದಳಪತಿ ವಿಜಯ್‌ಗೂ ಜೋಡಿಯಾಗಿ ರಶ್ಮಿಕಾ ನಟಿಸಲಿದ್ದಾರೆ.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT