ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಟನೆಯ ‘ಮೈಸಾ’ ಸಿನಿಮಾ ಫಸ್ಟ್ ಗ್ಲಿಮ್ಸ್ ಬಿಡುಗಡೆಯಾಗಿದೆ. ಹಿಂದೆಂದೂ ಕಾಣಿಸಿಕೊಳ್ಳದ ಲುಕ್ನಲ್ಲಿ ನಟಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ನಿಂದಲೂ ಸದ್ದು ಮಾಡಿದ್ದ ಮೈಸಾ ಸಿನಿಮಾ ವರ್ಷಾಂತ್ಯದಲ್ಲಿ ಗ್ಲಿಮ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ.

ಮೈಸಾ ಸಿನಿಮಾದಿಂದ ರವೀಂದ್ರ ಪುಲ್ಲೆ ನಿರ್ದೇಶಕರಾಗಿ ಚಿತ್ರರಂಗದಲ್ಲಿ ತನ್ನ ಮೊದಲ ಹೆಜ್ಜೆಯನ್ನು ಇಡುತ್ತಿದ್ದಾರೆ. ಅನ್ಫಾರ್ಮ್ಯುಲಾ ಫಿಲ್ಮ್ಸ್ ನಿರ್ಮಾಣ ಮಾಡುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಭಾರೀ ಬಜೆಟ್ನಲ್ಲಿ ಮೂಡಿಬರುತ್ತಿದೆ. ಸದ್ಯ ಬಿಡುಗಡೆ ಆಗಿರುವ ಗ್ಲಿಮ್ಸ್ನಲ್ಲಿ ರಶ್ಮಿಕಾ ಲುಕ್ ನೋಡುತ್ತಿದ್ದರೆ, ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗುತ್ತಿದೆ.

ಇಷ್ಟು ದಿನಗಳ ಕಾಲ ಕಮರ್ಷಿಯಲ್ ಸಿನಿಮಾಗಳಲ್ಲಿ ಅಭಿನಯ ಮಾಡಿ ಸೈ ಎನಿಸಿಕೊಂಡಿರುವ ರಶ್ಮಿಕಾ ಮಂದಣ್ಣ ಇದೇ ಮೊದಲ ಬಾರಿಗೆ ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಈ ಪಾತ್ರಕ್ಕಾಗಿ ಅವರು ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಗ್ಲಿಮ್ಸ್ನಲ್ಲಿ ನಾಯಕಿಯ ತಾಯಿ ಹೇಳುವ ಶಕ್ತಿಶಾಲಿ ಧ್ವನಿಯೊಂದಿಗೆ ಆರಂಭವಾಗುತ್ತದೆ. ಅವರ ಮಗಳು ಮರಣವನ್ನೇ ಎದುರಿಸಿ ನಿಲ್ಲುವ ಶಕ್ತಿ ಹೊಂದಿದ್ದಾಳೆ ಎಂದು ಹೇಳುತ್ತಾ, ‘ಈ ಹೆಸರನ್ನು ನೆನಪಿಟ್ಟುಕೊಳ್ಳಿ–ಮೈಸಾ’ ಎಂದು ಲೋಕಕ್ಕೆ ಸಂದೇಶ ನೀಡುತ್ತಾರೆ.

ಮೈಸಾ ಗೊಂಡಿ ಸಮುದಾಯದ ಮಹಿಳಾ ನಾಯಕಿಯನ್ನು ಅತ್ಯಂತ ಬಲಿಷ್ಠ, ಉಗ್ರ ಮತ್ತು ಭಾವನಾತ್ಮಕವಾಗಿ ತೋರಿಸುವ ಮೊದಲ ಚಲನಚಿತ್ರವಾಗಿ ಗುರುತಿಸಿಕೊಳ್ಳುತ್ತಿದೆ. ಚಿತ್ರದಲ್ಲಿ ಈಶ್ವರಿ ರಾವ್, ಗುರು ಸೋಮಸುಂದರಂ ಮತ್ತು ರಾವ್ ರಮೇಶ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ.

ಚಿತ್ರದ ಛಾಯಾಗ್ರಾಹಕ ಶ್ರೀಯಾಸ್ ಪಿ. ಕೃಷ್ಣ ಅವರ ಕೆಲಸ ಸಿನಿಮಾಗೆ ಮತ್ತಷ್ಟು ಬಲ ತಂದುಕೊಡಲಿದೆ. ಜೇಕ್ಸ್ ಬೆಜೋಯ್ ಅವರ ಸಂಗೀತ ಹಾಗೂ ಅಂತರರಾಷ್ಟ್ರೀಯ ಸ್ಟಂಟ್ ನಿರ್ದೇಶಕ ಆಂಡಿ ಲಾಂಗ್ ನೇತೃತ್ವದ ಆಕ್ಷನ್ ಸೀನ್ಗಳು ಅದ್ಭುತವಾಗಿ ಮೂಡಿ ಬರ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.