ಬುಧವಾರ, ಮಾರ್ಚ್ 3, 2021
29 °C

ಅಮಿತಾಬ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ರಶ್ಮಿಕಾ ಮಂದಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಕ್ಷಿಣದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಬಿಗ್‌ ಬಿ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ವಿಕಾಸ್‌ ಬಾಲ್‌ ನಿರ್ದೇಶನದ ಮುಂದಿನ ಚಿತ್ರದಲ್ಲಿ ರಶ್ಮಿಕಾ ಹಾಗೂ ಅಮಿತಾಬ್ ಒಟ್ಟಾಗಿ ನಟಿಸಲಿದ್ದಾರೆ. ರಿಯಲನ್ಸ್ ಎಂಟರ್‌ಟೈನ್‌ಮೆಂಟ್ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, 2021ರ ಮಾರ್ಚ್‌ ವೇಳೆಗೆ ಚಿತ್ರೀಕರಣ ಆರಂಭವಾಗಲಿದೆ.

24 ವರ್ಷದ ಈ ನಟಿ ಸದ್ಯ ಕನ್ನಡ ಹಾಗೂ ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ. 2016ರಲ್ಲಿ ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದ ಮೂಲಕ ಇವರು ತಮ್ಮ ಸಿನಿಪಯಣವನ್ನು ಆರಂಭಿಸಿದ್ದರು. ಕನ್ನಡದ ‘ಯಜಮಾನ’, ತೆಲುಗಿನ ‘ಗೀತಾ ಗೋವಿಂದಂ’, ‘ದೇವದಾಸ್‌’, ‘ಸರಿಲೇರು ನೀಕ್ವೆವರು’, ‘ಡಿಯರ್‌ ಕಾಮ್ರೇಡ್‌’ ಚಿತ್ರಗಳು ಈಕೆಗೆ ಯಶಸ್ಸು ತಂದುಕೊಟ್ಟಿವೆ.

‘ಬಾಲ್ ನಿರ್ದೇಶನದ ಈ ಚಿತ್ರ ಹಾಸ್ಯದ ಅಂಶವನ್ನು ಒಳಗೊಂಡಿದೆ. ಇದರಲ್ಲಿ ಅಮಿತಾಬ್, ರಶ್ಮಿಕಾ ಮಂದಣ್ಣ ಮುಖ್ಯಪಾತ್ರದಲ್ಲಿ ನಟಿಸಲಿದ್ದಾರೆ. ಇವರೊಂದಿಗೆ ನೀನಾ ಗುಪ್ತಾ ಸೇರಿದಂತೆ ದೊಡ್ಡ ತಾರಾಬಳಗವೇ ಚಿತ್ರಕ್ಕಿದೆ’ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

ತಾತ್ಕಾಲಿಕವಾಗಿ ಡೆಡ್ಲಿ ಎಂದು ಹೆಸರಿಸಲಾಗಿರುವ ಈ ಚಿತ್ರವು ತಂದೆ–ಮಗಳ ಕಥೆಯನ್ನು ಒಳಗೊಂಡಿದೆ.

ರಶ್ಮಿಕಾ ಮಂದಣ್ಣ ಮತ್ತು ಸಿದ್ಧಾರ್ಥ್ ಮಲ್ಹೋತ್ರ ನಟನೆಯ ‘ಮಿಷನ್ ಮಜ್ನು’ ಸಿನಿಮಾದ ಮೂಲಕ ಬಾಲಿವುಡ್‌ನಲ್ಲಿ ಮೊದಲ ಬಾರಿಗೆ ನಟಿಸುವ ತಯಾರಿ ನಡೆಸುತ್ತಿದ್ದಾರೆ. ಈ ಚಿತ್ರವು ಫೆಬ್ರವರಿಯಲ್ಲಿ ಸೆಟ್ಟೆರುವ ಸಾಧ್ಯತೆ ಇದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು