ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಬೆನ್ನಲ್ಲೆ ಅಭಿಮಾನಿಗಳಿಗೆ ಶುಭ ಸುದ್ದಿವೊಂದನ್ನು ಕೊಟ್ಟಿದ್ದಾರೆ. ಫೆ.26ರಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ವಿರೋಶ್ ತಮ್ಮ ಮುಂದಿನ ಸಿನಿಮಾದ ಬಗ್ಗೆ ಅಪ್ಡೇಟ್ವೊಂದನ್ನು ಕೊಟ್ಟಿದ್ದಾರೆ.

ಇದೀಗ ‘ರಣಬಾಲಿ’ ಸಿನಿಮಾದ ಪೋಸ್ಟರ್ ಹಾಗೂ ಮೊದಲ ಹಾಡು ಟಿ-ಸಿರೀಸ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಲಾಗಿದೆ.‘ಏನಯ್ಯ ಸ್ವಾಮಿ’ ಗೀತೆಯಲ್ಲಿ ವಿಜಯ್ ಹಾಗೂ ರಶ್ಮಿಕಾ ಗಂಡ ಹೆಂಡತಿಯಾಗಿ ಅಭಿನಯಿಸಿದ್ದಾರೆ. ಈ ಜೋಡಿಯ ವಿಡಿಯೊ ನೋಡಿದ ಅಭಿಮಾನಿಗಳಿಗೆ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಇಬ್ಬರು ‘ಗೀತ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು. ಇದೀಗ ಮತ್ತೆ ಒಟ್ಟಾಗಿ ‘ರಣಬಾಲಿ’ ಸಿನಿಮಾದಲ್ಲಿ ನಟಿಸಿದ್ದಾರೆ.

ಈಗಾಗಲೇ ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ರಣಬಾಲಿ ಎಂಬ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಮತ್ತು ರಶ್ಮಿಕಾ ಜಯಮ್ಮ ಎಂಬ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ನ ನವೀನ್ ಯೆರ್ನೇನಿ ಮತ್ತು ವೈ. ರವಿ ಶಂಕರ್ ನಿರ್ಮಿಸಿದ್ದಾರೆ ಮತ್ತು ಟಿ-ಸಿರೀಸ್ ಪ್ರಸ್ತುತಪಡಿಸಿದೆ. ಚಿತ್ರವು ಸೆಪ್ಟೆಂಬರ್ 11ರಂದು ಬಿಡುಗಡೆಯಾಗಲಿದೆ. ಕಥೆ 19ನೇ ಶತಮಾನದಲ್ಲಿ ಬ್ರಿಟಿಷ್ ಆಡಳಿತದ ಸಮಯದಲ್ಲಿ ನಡೆದ ನಿಜ ಘಟನೆಗಳಿಂದ ಪ್ರೇರಿತವಾಗಿದೆ.

ರಾಹುಲ್ ಸಾಂಕೃತ್ಯಾಯನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಅಜಯ್ ಅತುಲ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶ್ವೇತಾ ಮೋಹನ್ ಮತ್ತು ಕಾರ್ತಿಕ್ ಈ ಗೀತೆಯನ್ನ ಹಾಡಿದ್ದಾರೆ. ಕನ್ನಡದಲ್ಲಿಯೂ ಹಾಡು ಬಿಡುಗಡೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.