ಹೈದರಾಬಾದ್: ತೆಲುಗು ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಒಟ್ಟಾಗಿ ಕಾಣಿಸಿಕೊಳ್ಳುವ ಮೂಲಕ ಮತ್ತೆ ಸದ್ದು ಮಾಡುತ್ತಿದ್ದಾರೆ.
ಹೌದು, ಶನಿವಾರ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಒಟ್ಟಿಗೆ ವರ್ಕೌಟ್ ಮಾಡಿದ್ದಾರೆ. ಇದೀಗ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಜೋಡಿ ಈಗಾಗಲೇ ‘ಗೀತ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಮೋಡಿ ಮಾಡಿದೆ. ಚಿತ್ರ ನೋಡಿದ್ದ ಅಭಿಮಾನಿಗಳು ಇವರಿಬ್ಬರ ಕೆಮಿಸ್ಟ್ರಿ ಸಕ್ಕತ್ತಾಗಿ ವರ್ಕ್ ಆಗಿದೆ ಎಂದು ಖುಷಿ ಪಟ್ಟಿದ್ದರು.
‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದ ಇವರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಇಬ್ಬರೂ ಸಾಕಷ್ಟು ಬಾರಿ ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದರು.
ಸದ್ಯ ರಶ್ಮಿಕಾ ಮಂದಣ್ಣ ‘ಪುಷ್ಪ’ ಸಿನಿಮಾದಲ್ಲಿ ನಟಿಸುತ್ತಿದ್ದು, ಚಿತ್ರೀಕರಣದಲ್ಲಿ ತೊಡಗಿದ್ದಾರೆ. ವಿಜಯ್ ದೇವರಕೊಂಡ ಕೂಡ ಅಲ್ಲಿಯೇ ಇದ್ದಾರೆ. ಹೈದರಾಬಾದ್ ಜಿಮ್ನಲ್ಲಿ ಒಟ್ಟಾಗಿ ವರ್ಕೌಟ್ ಮಾಡಿದ್ದಾರೆ. ವರ್ಕೌಟ್ ಮುಗಿದ ಬಳಿಕ ಇಬ್ಬರೂ ಸೆಲ್ಫಿ ತೆಗೆದುಕೊಂಡಿದ್ದಾರೆ.
ಸದ್ಯ ವರ್ಕೌಟ್ ಫೋಟೊಗಳನ್ನು ಜಿಮ್ ತರಬೇತುದಾರ ಕುಲದೇಪ್ ಸೇಥಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.