ಬುಧವಾರ, ಅಕ್ಟೋಬರ್ 20, 2021
24 °C

ಹುಡುಗನ ಬಾಳಿನಲ್ಲಿ ಆಟವಾಡುತ್ತಿದ್ದಾರೆ: ರವೀನಾ ಟಂಡನ್ ಟೀಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

DH File photo

ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಬಳಿಕ ಅನೇಕ ಸೆಲೆಬ್ರಿಟಿಗಳು ಸಾಮಾಜಿಕ ತಾಣಗಳಲ್ಲಿ ಬೆಂಬಲ ಸೂಚಿಸುವ ಮೂಲಕ ಸುದ್ದಿಯಲ್ಲಿದ್ದಾರೆ.

ಹೃತಿಕ್ ರೋಷನ್, ಸುನೀಲ್ ಶೆಟ್ಟಿ, ಸುಸಾನೆ ಖಾನ್ ಮುಂತಾದವರು ಶಾರುಖ್ ಖಾನ್‌ಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದು ಮತ್ತು ಶಾರುಖ್ ಜತೆಗೆ ತಾವಿದ್ದೇವೆ ಎಂದು ಹೇಳಿದ್ದಾರೆ.

ಈ ಬಾರಿ ನಟಿ ರವೀನಾ ಟಂಡನ್ ಟ್ವೀಟ್ ಮಾಡಿದ್ದು, ಆರ್ಯನ್ ಖಾನ್‌ರನ್ನು ಸಮರ್ಥಿಸಿಕೊಂಡಿದ್ದಾರೆ.

ಆರ್ಯನ್ ವಿಚಾರದಲ್ಲಿ ಅನಗತ್ಯವಾಗಿ ರಾಜಕೀಯ ಮಾಡಲಾಗುತ್ತಿದೆ. ಇದು ನಾಚಿಕೆಗೇಡಿನ ಸಂಗತಿ. ಓರ್ವ ಯುವಕನ ಬಾಳಿನಲ್ಲಿ ಮತ್ತು ಭವಿಷ್ಯದಲ್ಲಿ ಆಟವಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಆರ್ಯನ್ ಖಾನ್ ಬಂಧನವನ್ನು ರವೀನಾ ಟಂಡನ್ ಖಂಡಿಸಿದ್ದು, ಸಾಮಾಜಿಕ ತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು