ಸೋಮವಾರ, ಜೂಲೈ 6, 2020
22 °C

ರವಿಚಂದ್ರನ್‌ @59: ಕನಸುಗಳ ಸಾಹುಕಾರನಿಗೆ ಜನ್ಮದಿನದ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಂದನವನದ ಕನಸುಗಾರ ಎಂದೇ ಖ್ಯಾತಿರಾಗಿರುವ ಕ್ರೇಜಿಸ್ಟಾರ್ ರವಿಚಂದ್ರನ್‌ ಅವರಿಗೆ ಇಂದು (ಮೇ 30) 59ನೇ  ವರ್ಷದ ಜನ್ಮದಿನದ ಸಂಭ್ರಮ.

ಕೊರೊನಾ ವೈರಸ್‌ ಸಂಕಷ್ಟದ ಹಿನ್ನೆಲೆಯಲ್ಲಿ ರವಿಚಂದ್ರನ್‌ ತಮ್ಮ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಅಭಿಮಾನಿಗಳಿಗೆ ಮನೆ ಮುಂದೆ ಬಂದು ಸೇರುವುದು ಬೇಡ ಎಂದು ಹೇಳಿದ್ದರು. 

59ನೇ ವಸಂತಕ್ಕೆ ಕಾಲಿಟ್ಟಿರುವ ರವಿಮಾಮನಿಗೆ ಕನ್ನಡ ಚಿತ್ರರಂಗದ ಗಣ್ಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ.

ಲಾಕ್‌ಡೌನ್‌ ಸಮಯದಲ್ಲಿ ರವಿಚಂದ್ರನ್‌ ಮೂರು ಸ್ಕ್ರಿಪ್ಟ್‌ಗಳನ್ನು ತಯಾರಿಸಿ ಎದ್ದಾರೆ ಎನ್ನಲಾಗಿದೆ. ಒಂದರಲ್ಲಿ ಮಗ ವಿಕ್ರಮ್‌ ಜೊತೆ ನಟಿಸಲಿದ್ದಾರೆ. ಲಾಕ್‌ಡೌನ್‌ ಸಂಪೂರ್ಣವಾಗಿ ತೆರೆವಾದ ಬಳಿಕ ಈ ಬಗ್ಗೆ ಮಾಹಿತಿ ನೀಡುವುದಾಗಿ ರವಿಚಂದ್ರನ್‌ ಹೇಳಿದ್ದಾರೆ ಎನ್ನಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು