ರಾಧಿಕಾ ಕುಮಾರಸ್ವಾಮಿ ಮುಖ್ಯಭೂಮಿಕೆಯಲ್ಲಿರುವ ‘ದಮಯಂತಿ’ ಚಿತ್ರವನ್ನು ಇದೇ 23ರಂದು ದಸರಾ ಹಬ್ಬದ ಪ್ರಯುಕ್ತ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಮಾಡಲಾಗುತ್ತಿದೆ.

ನಾಡಹಬ್ಬ ದಸರಾ ಸಮಯವಾಗಿರುವುದರಿಂದ ಅಭಿಮಾನಿಗಳು ‘ದಮಯಂತಿ’ ಚಿತ್ ಮರು ಬಿಡುಗಡೆ ಮಾಡಲು ಒತ್ತಾಯಿಸಿದ್ದಾರೆ. ಅವರ ಒತ್ತಾಯದ ಮೇರೆಗೆ ಚಿತ್ರವನ್ನು ಮರು ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ ಎಂದು ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ನವರಸನ್ ತಿಳಿಸಿದ್ದಾರೆ.

ಶ್ರೀ ಲಕ್ಷ್ಮೀ ವೃಷಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಪ್ರಧಾನ ಪಾತ್ರ ನಿಭಾಯಿಸಿರುವ ರಾಧಿಕಾ ಕುಮಾರಸ್ವಾಮಿ ಮಗಳು, ವೈದ್ಯೆ, ರಾಣಿ, ಪ್ರೇತ ಹೀಗೆ ನಾಲ್ಕು ಶೇಡ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಾಧುಕೋಕಿಲ, ಭಜರಂಗಿ ಲೋಕಿ, ತಬಲ ನಾಣಿ, ಮಜಾ ಟಾಕೀಸ್ ಪವನ್ ಮುಂತಾದವರು ನಟಿಸಿದ್ದಾರೆ.

ಪಿ.ಕೆ.ಎಚ್. ದಾಸ್ ಛಾಯಾಗ್ರಹಣ, ಗಣೇಶ್ ನಾರಾಯಣ್ ಸಂಗೀತ ನಿರ್ದೇಶನ, ಮಹೇಶ್ ಅವರ ಸಂಕಲನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.