ಸೋಮವಾರ, ಅಕ್ಟೋಬರ್ 18, 2021
24 °C

’ರಿಯಲ್‌ ಸ್ಟಾರ್‌’ ಉಪೇಂದ್ರ, ನಟಿ ಶ್ರುತಿಗೆ ಜನ್ಮದಿನದ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂದನವನದ ’ರಿಯಲ್‌ ಸ್ಟಾರ್‌’ ಉಪೇಂದ್ರ ಹಾಗೂ ಜನಪ್ರಿಯ ನಟಿ ಶ್ರುತಿ ಅವರು ಇಂದು (ಸೆ.18) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 

ಉಪೇಂದ್ರ 53ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುತ್ತಿದ್ದರೆ, ಶ್ರುತಿ 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಉಪೇಂದ್ರ ಹಾಗೂ ಶ್ರುತಿ ಅವರಿಗೆ ಚಂದನವನದ ತಾರೆಯರು, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದಾರೆ. 

ಉಪೇಂದ್ರ...

ಸದ್ಯ ಉಪೇಂದ್ರ ‘ತ್ರಿಶೂಲಂ’, ‘ಕಬ್ಜ’, ‘ಬುದ್ಧಿವಂತ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕಬ್ಜ ಚಿತ್ರತಂಡ ಜನ್ಮದಿನದ ಪ್ರಯುಕ್ತ ಮೋಷನ್‌ ಪೋಸ್ಟರ್‌ ಬಿಡುಗಡೆ ಮಾಡಿದೆ. ಈ ಚಿತ್ರದ ಟೀಸರ್‌ ದೀಪಾವಳಿಗೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ. 

‘ಅನಂತನ ಅವತಾರ’ ಚಿತ್ರದಲ್ಲಿ ನಟಿಸುವ ಮೂಲಕ ಉಪೇಂದ್ರ ಬೆಳ್ಳಿತೆರೆ ಪ್ರವೇಶಿಸಿದರು. ಇದು ತೆರೆಕಂಡಿದ್ದು 1989ರಲ್ಲಿ. ಅವರು ನಿರ್ದೇಶಿಸಿದ ಮೊದಲ ಚಿತ್ರ ‘ತರ್ಲೆ ನನ್ಮಗ’. ಬಳಿಕ ಹಲವು ಸಿನಿಮಾಗಳನ್ನು ನಿರ್ದೇಶಿಸಿದ ಅವರು ‘ಎ’ ಸಿನಿಮಾದ ಮೂಲಕ ನಾಯಕ ನಟನಾದರು.

ಉಪ್ಪಿ ನಿರ್ದೇಶಿಸಿದ ‘ಓಂ’ ಸಿನಿಮಾ ಇಂದಿಗೂ ಸಿನಿಪ್ರಿಯರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಅವರು ಕೊನೆಯದಾಗಿ ನಿರ್ದೇಶಿಸಿದ ಚಿತ್ರ ‘ಉಪ್ಪಿ 2’. ಮತ್ತೆ ತಾವು ನಿರ್ದೇಶನದತ್ತ ಹೊರಳುವುದಾಗಿ ಘೋಷಿಸಿದ್ದಾರೆ.

ಶ್ರುತಿ...

46ನೇ ವಸಂತಕ್ಕೆ ಕಾಲಿಟ್ಟಿರುವ ಶ್ರುತಿ ಸಿನಿಮಾ ಹಾಗೂ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ.

ರಾಜಕೀಯ ನಾಯಕರು ಸೇರಿದಂತೆ ಅಭಿಮಾನಿಗಳು ಹಾಗೂ ಸಿನಿಮಾ ರಂಗದ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಶ್ರುತಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತಿದ್ದಾರೆ. 

ಶಿವರಾಜ್‌ ಕುಮಾರ್‌ ನಟಿಸಿರುವ ಭಜರಂಗಿ–2 ಸಿನಿಮಾದಲ್ಲಿ ಶ್ರುತಿ ನಟಿಸಿದ್ದಾರೆ. ಈ ಚಿತ್ರ ಇನ್ನು ಬಿಡುಗಡೆಯಾಗಬೇಕಿದೆ.

ಶ್ರುತಿ ಕನ್ನಡದಲ್ಲಿ ನಾಯಕಿಯಾಗಿ ನಟಿಸಿದ ಮೊದಲ ಚಿತ್ರ ‘ಶ್ರುತಿ’. ತೆಲುಗು, ತಮಿಳು, ಮಲಯಾಳ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಧಾರಾವಾಹಿ, ಬಿಗ್‌ಬಾಸ್‌ ರಿಯಾಲಿಟಿ ಶೋಗಳಲ್ಲೂ ಕಾಣಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು