ಬುಧವಾರ, ಆಗಸ್ಟ್ 10, 2022
23 °C

ಶಶಾಂಕ್ ನಿರ್ದೇಶನದ ಚಿತ್ರದಲ್ಲಿ ಉಪ್ಪಿಗೆ ಜೋಡಿಯಾದ ಹರಿಪ್ರಿಯಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಜಾವಾಣಿ

ಬೆಂಗಳೂರು: ಕನ್ನಡದ ಬಹುಬೇಡಿಕೆಯ ನಟಿ ಹರಿಪ್ರಿಯಾ ರಿಯಲ್ ಸ್ಟಾರ್ ಉಪೇಂದ್ರ ಅವರ ಜೊತೆ ತೆರೆಯ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಈ ಹಿಂದೆ ಲೂನಾರ್ಸ್ ಜಾಹೀರಾತಿನಲ್ಲಿ ಉಪ್ಪಿ ಜೊತೆ ನಟಿಸಿದ್ದ ಅವರು ಮೊದಲ ಬಾರಿಗೆ ಸಿನಿಮಾದಲ್ಲಿ ಅವರ ಜೊತೆಗೆ ನಟಿಸುತ್ತಿದ್ದಾರೆ.

ಈ ಚಿತ್ರಕ್ಕೆ ‘ಮೊಗ್ಗಿನ ಮನಸ್ಸು’, ‘ಕೃಷ್ಣನ್ ಲವ್ ಸ್ಟೋರಿ’ ಖ್ಯಾತಿಯ ಶಶಾಂಕ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ‘ಪೆಟ್ರೋಮ್ಯಾಕ್ಸ್’ ಸಿನಿಮಾದ ಚಿತ್ರೀಕರಣ ಮುಗಿಸಿರುವ ಹರಿಪ್ರಿಯಾ, ಏಪ್ರಿಲ್‌ನಲ್ಲಿ ಈ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಳ್ಳಲಿದ್ದಾರೆ.

‘ಉಪೇಂದ್ರ ಅವರ ಜೊತೆ ಸಿನಿಮಾದಲ್ಲಿ ನಟಿಸಬೇಕು ಎಂಬ ಆಸೆ ಯಾವಾಗಲೂ ಇತ್ತು. ಆ ಆಸೆ ಈ ಸಿನಿಮಾದ ಮೂಲಕ ನನಸಾಗುತ್ತಿದೆ. ಶಶಾಂಕ್ ಸಿನಿಮಾದಲ್ಲಿ ಮಹಿಳಾ ಪಾತ್ರಗಳಿಗೆ ವಿಶೇಷ ಮಹತ್ವ ಇರುತ್ತದೆ. ಈ ಚಿತ್ರದಲ್ಲಿಯೂ ನನ್ನ ಪಾತ್ರಕ್ಕೆ ತುಂಬ ಮಹತ್ವ ಇದೆ. ಚಿತ್ರದುದ್ದಕ್ಕೂ ಕಾಣಿಸಿಕೊಳ್ಳುತ್ತೇನೆ. ಸುಶಿಕ್ಷಿತ, ದಿಟ್ಟ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ’ ಎನ್ನುವ ಹರಿಪ್ರಿಯಾ ಪಾತ್ರದ ಬಗ್ಗೆ ಹೆಚ್ಚು ಸುಳಿವು ಕೊಡುವುದಿಲ್ಲ.

ಚಿತ್ರದ ಶೀರ್ಷಿಕೆ ಇನ್ನೂ ಅಂತಿಮಗೊಂಡಿಲ್ಲ. ಬೇರೆ ಪಾತ್ರಗಳಿಗೂ ಕಲಾವಿದರ ಆಯ್ಕೆ ನಡೆಯಬೇಕಿದೆ. ಹರಿಪ್ರಿಯಾ ನಟನೆಯ ರಿಷಬ್‌ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ‘ಬೆಲ್ ಬಾಟಂ 2’ ಸಿನಿಮಾದ ಚಿತ್ರೀಕರಣವೂ ಇನ್ನೇನು ಶುರುವಾಗಲಿದೆ. ಇದರ ಜೊತೆಗೆ ಇನ್ನೂ ಎರಡು ಚಿತ್ರಗಳಿಗೆ ಅವರು ಸಹಿ ಮಾಡಿದ್ದು, ಆ ಸಿನಿಮಾಗಳಲ್ಲಿಯೂ ವಿಭಿನ್ನ ಪಾತ್ರಗಳಲ್ಲಿ ಹರಿಪ್ರಿಯಾ ಕಾಣಿಸಿಕೊಳ್ಳಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು