ಗುರುವಾರ , ಮಾರ್ಚ್ 23, 2023
22 °C

ಬೋಲ್ಡ್ ದೃಶ್ಯಗಳಲ್ಲಿ ನಟನೆ: ಸಮಂತಾ–ನಾಗ ಚೈತನ್ಯ ವಿಚ್ಛೇದನಕ್ಕೆ ಕಾರಣ!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Naga Chaitanya Instagram Post

ಬೆಂಗಳೂರು: ತೆಲುಗು ಚಿತ್ರರಂಗದಲ್ಲಿ ಜನಪ್ರಿಯ ತಾರಾ ದಂಪತಿಯಾಗಿದ್ದ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರ ವಿಚ್ಛೇದನವಾಗಿ ಹಲವು ತಿಂಗಳುಗಳೇ ಕಳೆದಿವೆ.

ಆದರೆ ಈ ಜೋಡಿಯ ಬಗ್ಗೆ ಅಭಿಮಾನಿಗಳ ಮಧ್ಯೆ ಚರ್ಚೆ ಮಾತ್ರ ನಿಂತಿಲ್ಲ.

ಮದುವೆ ಬಳಿಕ ಸಮಂತಾ ಅವರು ಬೋಲ್ಡ್ ದೃಶ್ಯಗಳಲ್ಲಿ ನಟಿಸುವುದನ್ನು ಮುಂದುವರಿಸಿದ್ದೇ ಅವರ ದಾಂಪತ್ಯದಲ್ಲಿ ಬಿರುಕು ಮೂಡಲು ಕಾರಣ ಎನ್ನಲಾಗಿದೆ.

ರಾಮ್ ಚರಣ್ ಜತೆ ಸಮಂತಾ 'ರಂಗಸ್ಥಳಂ' ಚಿತ್ರದಲ್ಲಿ ಬೋಲ್ಡ್ ಆಗಿ ನಟಿಸಿದ್ದರು. ಈ ವಿಚಾರವಾಗಿ ದಂಪತಿ ಮಧ್ಯೆ ವಿರಸ ಮೂಡಿತ್ತು.

ಬಳಿಕ ಅವರು 'ದಿ ಫ್ಯಾಮಿಲಿ ಮ್ಯಾನ್ 2' ವೆಬ್ ಸರಣಿಯಲ್ಲಿ ಕೂಡ ಬೋಲ್ಡ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರಿಂದ ಮತ್ತೆ ಮನಸ್ತಾಪ ಮೂಡಿ ಇಬ್ಬರೂ ವಿಚ್ಛೇದನ ಪಡೆದುಕೊಳ್ಳುವಂತಾಯಿತು ಎಂದು ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ ಚರ್ಚೆ ನಡೆಸಿದ್ದಾರೆ.

ವಿಚ್ಛೇದನ ಪಡೆದುಕೊಂಡ ಬಳಿಕ ಸಮಂತಾ, ಸಾಮಾಜಿಕ ತಾಣಗಳ ಖಾತೆಗಳಲ್ಲಿ ನಾಗ ಚೈತನ್ಯ ಜತೆಗಿದ್ದ ಫೋಟೊಗಳನ್ನು ಡಿಲೀಟ್ ಮಾಡಿದ್ದಾರೆ. ಅಲ್ಲದೆ, ಹೊಸ ಸಿನಿಮಾ ಒಪ್ಪಿಕೊಂಡು ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಪುಷ್ಪ ಸಿನಿಮಾದಲ್ಲಿ ಸಮಂತಾ ಮೊದಲ ಬಾರಿಗೆ ಐಟಂ ಸಾಂಗ್‌ನಲ್ಲಿ ಕೂಡ ಕಾಣಿಸಿಕೊಂಡಿದ್ದಾರೆ. ಪುಷ್ಪ ಚಿತ್ರ ಶುಕ್ರವಾರ ಬಿಡುಗಡೆಯಾಗಿದ್ದು, ಈ ಸಂದರ್ಭದಲ್ಲಿ ಸಮಂತಾ ಅವರ ವಿಚ್ಛೇದನ ಮತ್ತೆ ಚರ್ಚೆಗೆ ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು