ಗುರುವಾರ , ಜೂಲೈ 9, 2020
24 °C

ನಟಿ ರೆಜಿನಾ ಲಿಪ್‌ಲಾಕ್‌ ಮಾಡಲ್ಲ ಎಂದಿದ್ದೇಕೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದು‌ಕೊಳ್ಳುವುದು ಕಡ್ಡಾಯ. ಸರ್ಕಾರ ಕೂಡ ಈ ಬಗ್ಗೆ ಸ್ಪಷ್ಟವಾಗಿ ಮಾರ್ಗಸೂಚಿ ಪ್ರಕಟಿಸಿದೆ. ಆದರೆ, ಸಿನಿಮಾ ಶೂಟಿಂಗ್‌ನಲ್ಲಿ ಇಂತಹ ಮಾರ್ಗಸೂಚಿಗಳನ್ನು ಪಾಲಿಸುವುದು ತುಸು ಕಷ್ಟಕರ. ಏಕೆಂದರೆ ಹಾಡುಗಳು, ದೃಶ್ಯಗಳ ಚಿತ್ರೀಕರಣದ ವೇಳೆ ಮಾರ್ಗಸೂಚಿ ಪಾಲನೆ ಕಷ್ಟಕರ ಎನ್ನುವುದು ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರ ಅಂಬೋಣ. ಆದರೆ ನಟ, ನಟಿಯರು ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿ ಪಾಲಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ.

ನಟಿ ರೆಜಿನಾ ಕಸ್ಸಂದ್ರ ಅವರು ವಿಶಾಲ್‌ ನಟನೆಯ ತಮಿಳಿನ ‘ಚಕ್ರ’ ಚಿತ್ರದಲ್ಲಿ ಮುಖ್ಯಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಮತ್ತೊಂದು ತಮಿಳು ಚಿತ್ರ ‘ಕಲ್ಲಾಪಾರ್ಟ್‌’ಯಲ್ಲೂ ನಟಿಸುತ್ತಿದ್ದಾರೆ. ಈ ನಡುವೆಯೇ ಆಕೆ ತಾನು ಮುಂದೆ ಒಪ್ಪಿಕೊಳ್ಳುವ ಸಿನಿಮಾಗಳ ಬಗ್ಗೆ ಕೆಲವು ಸ್ವಯಂ ನಿರ್ಬಂಧಗಳನ್ನು ವಿಧಿಸಿಕೊಂಡಿರುವ ಬಗ್ಗೆ ಹೇಳಿಕೊಂಡಿದ್ದಾರೆ.

‘ನಾನು ಮುಂದೆ ನಟಿಸುವ ಯಾವುದೇ ಸಿನಿಮಾಗಳಲ್ಲಿ ನಾಯಕ ಅಥವಾ ಸಹ ನಟರನ್ನು ತಬ್ಬಿಕೊಳ್ಳುವುದಿಲ್ಲ. ಲಿಪ್‌ಲಾಕ್‌ ದೃಶ್ಯಗಳಲ್ಲಿ ಪಾಲ್ಗೊಳ್ಳುವುದಿಲ್ಲ. ಮುತ್ತಿನ ದೃಶ್ಯಗಳನ್ನೂ ಒಪ್ಪಿಕೊಳ್ಳುವುದಿಲ್ಲ’ ಎಂದು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿದ್ದಾರೆ ರೆಜಿನಾ.

‘ಪ್ರಸ್ತುತ ಕೊರೊನಾ ಸೋಂಕು ಹಬ್ಬುವಿಕೆ ತಹಬಂದಿಗೆ ಬಂದಿಲ್ಲ. ಹಾಗಾಗಿ, ಇಂತಹ ಸ್ವಯಂ ನಿರ್ಧಾರ ತಳೆಯುವುದು ಅನಿವಾರ್ಯ. ಪ್ರಸಕ್ತ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕಿದೆ. ಕೊರೊನಾ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಬಳಿಕ ನನ್ನ ನಿರ್ಧಾರವನ್ನು ಪುನರ್‌ ಪರಿಶೀಲಿಸುತ್ತೇನೆ’ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು