ಶುಕ್ರವಾರ, ಮೇ 20, 2022
20 °C

ಪುನೀತ್ ರಾಜ್‌ಕುಮಾರ್ ಸ್ಮರಣೆ: 7ರಂದು ‘ಅಪ್ಪು ಅಮರ’ ಪುಸ್ತಕ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಡಾ.ಪುನೀತ್ ರಾಜ್ ಕುಮಾರ್ ಕುರಿತು ಲೇಖಕ, ಪ್ರಕಾಶಕ ಭದ್ರಾವತಿ ರಾಮಾಚಾರಿ ಅವರು ಸಂಪಾದಿಸಿದ ‘ಅಪ್ಪು ಅಮರ’ ಪುಸ್ತಕ ಮೇ 7ರಂದು ಬೆಳಿಗ್ಗೆ 10ಕ್ಕೆ ನಗರದ ನಯನ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ.

ಹಿರಿಯ ನಟ ರಾಮಕೃಷ್ಣ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

ಚಿತ್ರ ನಿರ್ದೇಶಕ ಓಂ ಸಾಯಿ ಪ್ರಕಾಶ್, ನಿರ್ಮಾಪಕ ಎಸ್.ಎ.ಗೋವಿಂದ ರಾಜ್, ಸಂಗೀತ ನಿರ್ದೇಶಕರಾದ ಗುರುಕಿರಣ್, ವಿ.ಮನೋಹರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಕವಿ ಡಾ.ದೊಡ್ಡರಂಗೇಗೌಡ, ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶ ಕುಮಾರ ಹೊಸಮನಿ, ಡಾ.ಸಿ.ಸೋಮಶೇಖರ್, ಧೀರೆನ್ ರಾಮ್‌ಕುಮಾರ್, ಭಾ.ಮ.ಹರೀಶ್, ನಟಿ ಪ್ರೇಮಾ, ಕಿರುತೆರೆ ನಟಿ ಅಪೂರ್ವ ಡಿ. ಸಾಗರ್, ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ ಎಲ್.ನಾಗರಾಜಚಾರ್ ಭಾಗವಹಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಡಾ.ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಎನ್.ಆರ್.ರಮೇಶ್‌ರವರಿಗೆ `ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ' ಪ್ರದಾನ ಮಾಡಲಾಗುತ್ತದೆ. ಇದೇ ಸಮಾರಂಭದಲ್ಲಿ`ಅಲ್ಲಮ ಪ್ರಭು ದೇವರು’,`ಕೈವಾರ ತಾತಯ್ಯ’ ‘ಮುಕ್ತಕ ಕಾವ್ಯ’, `ರಾಮಕಥಾ ಮಿತ್ರ’,`ಊರುಗೋಲಿನ ಸುತ್ತ ಮುತ್ತ’ ಕೃತಿಗಳಿಗೆ ‘ಸಾಹಿತ್ಯ ಸುಮ ಪ್ರಶಸ್ತಿ’ ನೀಡಲಾಗುತ್ತದೆ ಎಂದು ಕಾವ್ಯಸ್ಪಂದನ ಪಬ್ಲಿಕೇಷನ್ ಸಂಸ್ಥೆಯ ಮಾಲೀಕರಾದ ಭದ್ರಾವತಿ ರಾಮಾಚಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು