ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಆದೇಶ ರದ್ದು ಮಾಡಿದ ಬೆನ್ನಲ್ಲೇ ಬೆಂಗಳೂರಿನ ಹೊಸಕೆರೆಯಳ್ಳಿಯ ಅಪಾರ್ಟ್ಮೆಂಟ್ ಬಳಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಕರೆತರಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಇಂದು ಆದೇಶ ಹೊರಡಿಸಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳ ಜಾಮೀನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಹಾಗೂ ಆರ್. ಮಹದೇವನ್ ಅವರಿದ್ದ ಪೀಠ, ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಲವು ನ್ಯೂನತೆಗಳಿವೆ ಎಂದು ಹೇಳಿ ಜಾಮೀನು ರದ್ದುಗೊಳಿಸಿದೆ.

ಪವಿತ್ರಾ ಗೌಡ ಬಂಧನ...

ಅನ್ನಪೂರ್ಣಶ್ವೇರಿ ನಗರದ ಪೊಲೀಸ್ ಠಾಣೆಯ ಪೊಲೀಸರು ಗುರುವಾರ ಮಧ್ಯಾಹ್ನ ಪವಿತ್ರಾ ಗೌಡರನ್ನು ಬಂಧಿಸಿದ್ದಾರೆ. ಇತರೆ ಆರೋಪಿಗಳಾದ ಪ್ರದೋಶ್, ಲಕ್ಷ್ಮಣ್, ನಾಗರಾಜ್ ಅವರನ್ನು ಬಂಧಿಸಲಾಗಿದೆ.
.ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಆಪ್ತೆ ಪವಿತ್ರಾ ಗೌಡ ಬಂಧನ.ನಟ ದರ್ಶನ್ ಮತ್ತೆ ಬಳ್ಳಾರಿ ಜೈಲಿಗೆ? ಅಧಿಕಾರಿಗಳು ಹೇಳಿದ್ದೇನು?.ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್.ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ವಶಕ್ಕೆ SC ನಿರ್ದೇಶನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.