ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಶಾಂತ್ ಪ್ರಕರಣ: ನಟಿ ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನ ಅ.20ರ ವರೆಗೂ ವಿಸ್ತರಣೆ

Last Updated 6 ಅಕ್ಟೋಬರ್ 2020, 9:56 IST
ಅಕ್ಷರ ಗಾತ್ರ

ಮುಂಬೈ: ಮಾದಕವಸ್ತು ನಿಯಂತ್ರಣ ಸಂಸ್ಥೆಯಿಂದ (ಎನ್‌ಸಿಬಿ) ಬಂಧನಕ್ಕೆ ಒಳಗಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸೋದರ ಶೋಯಿಕ್ ನ್ಯಾಯಾಂಗ ಬಂಧನ ವಿಸ್ತರಿಸಿ ವಿಶೇಷ ಕೋರ್ಟ್ ಆದೇಶಿಸಿದೆ.

ಎನ್‌ಡಿಪಿಎಸ್ ವಿಶೇಷ ಕೋರ್ಟ್ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 20ರವರೆಗೂ ವಿಸ್ತರಿಸಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ‌ ಪ್ರಕರಣದಲ್ಲಿ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ರಿಯಾ ಮತ್ತು ಶೋಯಿಕ್ ಅವರನ್ನು ಎನ್‌ಸಿಬಿ ಕಳೆದ ತಿಂಗಳು ಬಂಧಿಸಿದೆ.

ಇಬ್ಬರೂ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ಈ ಹಿಂದೆ ತಿರಸ್ಕರಿಸಿದೆ. ಅನಂತರ ಅವರು ಬಾಂಬೆ ಹೈಕೋರ್ಟ್‌ಗೆ ಜಾಮೀನು ಕೋರಿ ಮನವಿ ಸಲ್ಲಿಸಿದ್ದು, ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ಸುಶಾಂತ್ ಸಿಂಗ್‌ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಿ ಸುಶಾಂತ್ ಸಿಂಗ್ ತಂದೆ ಕೆ.ಕೆ. ಸಿಂಗ್ ಅವರು, ನಟಿ ರಿಯಾ ಮತ್ತು ಅವರ ಕುಟುಂಬದವರ ವಿರುದ್ಧ ಜುಲೈ 25ರಂದು ಪಟ್ನಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಪೊಲೀಸರು ರಿಯಾ, ಆಕೆಯ ಪೋಷಕರಾದ ಇಂದ್ರಜಿತ್, ಸಂಧ್ಯಾ ಚಕ್ರವರ್ತಿ, ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮುಯೆಲ್ ಮಿರಾಂಡಾ ಮತ್ತು ಶೃತಿ ಮೋದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಬಳಿಕ ಸಿಬಿಐ ಪ್ರಕರಣದ ತನಿಖೆ ಕೈಗೊಂಡಿತು. ಇ.ಡಿ ಮತ್ತು ಎನ್‌ಸಿಬಿ ಸಹ ಇದೇ ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT