ನಟ ಸುಶಾಂತ್ ಸಹೋದರಿ ವಿರುದ್ಧ ದೂರು ದಾಖಲಿಸಿದ ರಿಯಾ ಚಕ್ರವರ್ತಿ

ಮುಂಬೈ: ನಕಲಿ ವೈದ್ಯಕೀಯ ದಾಖಲೆ ಸೃಷ್ಟಿಸಿದ್ದಾರೆಂದು ಆರೋಪಿಸಿ ಸುಶಾಂತ್ ಸಹೋದರಿ ವಿರುದ್ಧ ನಟಿ ರಿಯಾ ಚಕ್ರವರ್ತಿ ಮುಂಬೈನಲ್ಲಿ ದೂರು ದಾಖಲಿಸಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ರಿಯಾ ಚಕ್ರವರ್ತಿ ಅವರು ಸುಶಾಂತ್ ಸಹೋದರಿ ಪ್ರಿಯಾಂಕಾ ಸಿಂಗ್ ಮತ್ತು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ಡಾ.ತರುಣ್ ಕುಮಾರ್ ಅವರು ನಕಲಿ ವೈದ್ಯಕೀಯ ದಾಖಲೆ ಸೃಷ್ಟಿಸಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.
ಜೂನ್ 8 ರಂದು ಸುಶಾಂತ್ ಅವರು ಮುಂಬೈನಲ್ಲೇ ಇದ್ದರು. ಆದರೆ, ಅದೇ ದಿನದಂದು ದೆಹಲಿಯ ಆಸ್ಪತ್ರೆಯಲ್ಲಿ ಸುಶಾಂತ್ ಅವರು ವೈದ್ಯಕೀಯ ನೆರವು ಪಡೆದಿದ್ದರು ಎಂಬುದಾಗಿ ನಕಲಿ ದಾಖಲೆ ಸೃಷ್ಟಿಸಲಾಗಿದೆ ಎಂದು ರಿಯಾ ತಿಳಿಸಿದ್ದಾರೆ.
ಜೂನ್ 8 ರಂದು ನಟ ಸುಶಾಂತ್ ಮತ್ತು ಅವರ ಸಹೋದರಿ ನಡುವೆ ನಡೆದ ವಾಟ್ಸಾಪ್ ಚಾಟ್ಗಳನ್ನು ಆಧರಿಸಿ ದೂರು ನೀಡಲಾಗಿದೆ. ಅದೇ ದಿನದಂದು ನಟಿ ರಿಯಾ ಚಕ್ರವರ್ತಿ ಸುಶಾಂತ್ ಅಪಾರ್ಟ್ಮೆಂಟ್ನಿಂದ ಹೊರಬಂದಿದ್ದರು ಎಂಬುದಾಗಿ ತಿಳಿದುಬಂದಿದೆ.
ಇದನ್ನೂ ಓದಿ: ಎನ್ಸಿಬಿ ಮುಂದೆ 2ನೇ ದಿನ ವಿಚಾರಣೆಗೆ ಹಾಜರಾದ ರಿಯಾ ಚಕ್ರವರ್ತಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.