ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುಶಾಂತ್ ಹುಟ್ಟುಹಬ್ಬ: ಅಗಲಿದ ಗೆಳೆಯನನ್ನು ನೆನೆದು ರಿಯಾ ಚಕ್ರವರ್ತಿ ಹೇಳಿದ್ದೇನು?

Published : 22 ಜನವರಿ 2022, 7:06 IST
ಫಾಲೋ ಮಾಡಿ
Comments

ಮುಂಬೈ: ಆತ್ಮಹತ್ಯೆಗೆ ಶರಣಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಗಳು, ಸ್ನೇಹಿತರು ಹಾಗೂ ಅವರ ಕುಟುಂಬದವರು ಅವರನ್ನು ನೆನಪಿಸಿಕೊಂಡಿದ್ದಾರೆ.

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸುಶಾಂತ್ ಅವರ ಗೆಳತಿ ನಟಿ ರಿಯಾ ಚಕ್ರವರ್ತಿ ವಿಡಿಯೊವೊಂದನ್ನು ಹಂಚಿಕೊಂಡಿದ್ದು, ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಭಾವನಾತ್ಮಕ ಸಂದೇಶವನ್ನು ಪ್ರಕಟಿಸಿದ್ದಾರೆ.

ಈ ವಿಡಿಯೊವನ್ನು 3.91 ಲಕ್ಷ ಮಂದಿ ಇಷ್ಟಪಟ್ಟಿದ್ದು, ಅನೇಕರು ‘ಮಿಸ್‌ ಯೂ ಸುಶಾಂತ್’ ಎಂದು ಕಾಮೆಂಟ್ ಮಾಡಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ 2020ರ ಜೂನ್ 14ರಂದು ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಸುಶಾಂತ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಿ ಅವರ ತಂದೆ ಕೆ.ಕೆ.ಸಿಂಗ್ ಅವರು, ನಟಿ ರಿಯಾ ಮತ್ತು ಅವರ ಕುಟುಂಬದವರ ವಿರುದ್ಧ 2020ರ ಜುಲೈ 25ರಂದು ಪಟ್ನಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT