ಗುರುವಾರ , ಮೇ 26, 2022
23 °C

ಮಾರ್ಚ್‌ 5ಕ್ಕೆ ‘ಹೀರೊ’ ಆಗಿ ತೆರೆ ಮೇಲೆ ಬರಲಿದ್ದಾರೆ ರಿಷಬ್‌ ಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಟ, ನಿರ್ದೇಶಕ ರಿಷಬ್ ಶೆಟ್ಟಿ ತಾವು ನಟಿಸಿರುವ ಬಹುನಿರೀಕ್ಷಿತ ‘ಹೀರೊ’ ಚಿತ್ರದ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ರಿಷಬ್‌ ‘ನಿಮ್ಮೆಲ್ಲರಿಗೂ ಅಶೋಕವನ ಎಸ್ಟೇಟಿಗೆ ಸ್ವಾಗತ. ಹೀರೊ ಮಾರ್ಚ್ 5ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ. ನಿಮ್ಮೆಲ್ಲರ ಪ್ರೀತಿಯಿರಲಿ’ ಎಂದು ಬರೆದುಕೊಂಡಿದ್ದಾರೆ. ರಿಷಬ್ ಹಾಗೂ ಮಗಳು ಜಾನಕಿ ಖ್ಯಾತಿಯ ಗಾನವಿ ಲಕ್ಷಣ್‌ ಈ ಚಿತ್ರದಲ್ಲಿ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ರಿಷಬ್‌ ಈ ಚಿತ್ರದ ನಿರ್ಮಾಣದ ಹೊಣೆಯನ್ನು ಹೊತ್ತಿದ್ದಾರೆ.

 

 

 

ಬಿಡುಗಡೆ ದಿನಾಂಕದೊಂದಿಗೆ ಚಿತ್ರದ ಪೋಸ್ಟರ್‌ವೊಂದನ್ನು ಹಂಚಿಕೊಂಡಿದ್ದಾರೆ ರಿಷಬ್‌. ಪೋಸ್ಟರ್‌ನಲ್ಲಿ ರಕ್ತಸಿಕ್ತ ಮುಖದೊಂದಿಗೆ ಗನ್‌ ಹಿಡಿದು ಕುಳಿತಿರುವ ಅವರ ಹಿಂದೆ ಗನ್‌ ಹಿಡಿದು ನಿಂತಿದ್ದಾರೆ ನಾಯಕಿ. ಅವರ ಪೋಸ್ಟ್‌ಗೆ ಹಲವು ಅಭಿಮಾನಿಗಳು ಆಲ್‌ ದಿ ಬೆಸ್ಟ್ ತಿಳಿಸಿದ್ದಾರೆ.

 

ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಿಷಬ್‌ ಬೆಲ್‌ಬಾಟಂ ಚಿತ್ರದ ಮೂಲಕ ಪೂರ್ಣಪ್ರಮಾಣದ ನಾಯಕನಾಗಿ ತೆರೆ ಮೇಲೆ ಕಾಣಿಸಿಕೊಂಡಿದ್ದರು. ಇದು ನಾಯಕನಾಗಿ ನಟಿಸುತ್ತಿರುವ ಅವರ ಎರಡನೇ ಚಿತ್ರ. ಇದರಲ್ಲಿ ಅವರು ಹೇರ್‌ಸ್ಟೈಲಿಸ್ಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಹೀರೊಗೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನವಿದೆ. ಎಂ. ಭರತ್ ರಾಜ್ ಈ ಸಿನಿಮಾದ ಮೂಲಕ ನಿರ್ದೇಶಕನ ಪಟ್ಟಕ್ಕೇರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು