ನಟ ರಿಷಬ್ ಶೆಟ್ಟಿ ಅವರಿಗೆ ‘ಕಣ್ಣೀರು ಸುರಿಸಬೇಡ ನಿನ್ನ ಜೊತೆ ನಾನಿದ್ದೇನೆ’ ಎಂದು ದೈವ ಅಭಯ ನೀಡಿದೆ. ಕಾಂತಾರ ಅಧ್ಯಾಯ–1 ಸಿನಿಮಾ ಯಶಸ್ವಿಯಾದ ಬೆನ್ನಲ್ಲೆ ನಟ ರಿಷಬ್ ಶೆಟ್ಟಿ, ಪತ್ನಿ ಪ್ರಗತಿ ಶೆಟ್ಟಿ ಹಾಗೂ ವಿಜಯ್ ಕಿರಗಂದೂರು ತುಳುನಾಡಿನ ದೈವ ಪಂಜುರ್ಲಿಗೆ ಹರಕೆ ತೀರಿಸಲು ಹೋಗಿದ್ದರು.

ನಿನ್ನೆ (ಗುರುವಾರ) ಮಂಗಳೂರಿನ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ನಡೆಯಿತು. ಆಗ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂಸ್ ವತಿಯಿಂದ ಹರಕೆ ನೇಮೋತ್ಸವ ಆಯೋಜನೆಗೊಂಡಿತ್ತು.
.ಕಾಂತಾರ ಯಶಸ್ಸಿನ ಬೆನ್ನಲ್ಲೆ ಗೋವಾ ಮುಖ್ಯಮಂತ್ರಿ ಭೇಟಿಯಾದ ರಿಷಬ್ ಶೆಟ್ಟಿ ದಂಪತಿ.ಕಾಂತಾರ ಚಾಪ್ಟರ್ 1: ಚಿತ್ರೀಕರಣದ ಸೊಗಸಾದ ಪಟಗಳ ಹಂಚಿಕೊಂಡ ರಿಷಬ್ ಶೆಟ್ಟಿ.
ರಿಷಬ್ ಶೆಟ್ಟಿ ಅವರನ್ನು ಅಪ್ಪಿ ಅಲಂಗಿಸಿ ಮಡಿಲಲ್ಲಿ ಮಲಗಿದ ಪಂಜುರ್ಲಿ ದೈವ ‘ನಿನ್ನ ಜೊತೆ ನಾನಿದ್ದೇನೆ’ ಎಂದು ಕೈ ಸನ್ನೆ ಮಾಡುವ ಮೂಲಕ ಅಭಯ ನೀಡಿತು. ವೀಳ್ಯ ಶಕುನದ ಮೂಲಕ ನಾನು ಸಂತುಷ್ಟನಾಗಿದ್ದೇನೆ ಎಂದು ಹೇಳಿದೆ.

ಮಧ್ಯರಾತ್ರಿವರೆಗೂ ನಡೆದ ಕೋಲ ಸೇವೆಯಲ್ಲಿ ನಿರ್ಮಾಪಕ ವಿಜಯ್ ಕಿರಂಗದೂರು, ನಿರ್ದೇಶಕ ಸಂತೋಷ್ ಆನಂದ ರಾಮ್, ರಿಷಬ್ ಶೆಟ್ಟಿ, ಪತ್ನಿ ಪ್ರಗತಿ ಶೆಟ್ಟಿ ಸೇರಿದಂತೆ ಚಿತ್ರತಂಡದವರು ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.