ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಷಬ್‌ ಶೆಟ್ಟಿ–ಮೋಹನ್‌ಲಾಲ್‌ ಭೇಟಿ!

Published 18 ಏಪ್ರಿಲ್ 2024, 13:26 IST
Last Updated 18 ಏಪ್ರಿಲ್ 2024, 13:26 IST
ಅಕ್ಷರ ಗಾತ್ರ

ಬೆಂಗಳೂರು: ಮಲಯಾಳ ಸಿನಿಮಾರಂಗದ ಖ್ಯಾತ ನಟ ಮೋಹನ್‌ಲಾಲ್‌ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬುಧವಾರ(ಏ.17) ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು, ಇದೇ ಸಂದರ್ಭದಲ್ಲಿ ಮೋಹನ್‌ಲಾಲ್‌ ಅವರನ್ನು ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿಯಾಗಿದ್ದಾರೆ. 

ರಿಷಬ್‌ ಶೆಟ್ಟಿ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ‘ಕಾಂತಾರ–ಒಂದು ದಂತಕಥೆ’ಯ ಮೊದಲ ಅಧ್ಯಾಯದ ಚಿತ್ರೀಕರಣಕ್ಕೆ ಚಿತ್ರತಂಡ  ಸಜ್ಜಾಗಿದೆ. ಕಾಂತಾರ ಚಿತ್ರದ ಪ್ರೀಕ್ವೆಲ್ ಚಿತ್ರೀಕರಣಕ್ಕಾಗಿ ರಿಷಬ್‌ ಊರಾದ ಕೆರಾಡಿಯಲ್ಲಿ ಬೃಹತ್ ಸೆಟ್‌ಗಳನ್ನು ನಿರ್ಮಿಸಲಾಗಿದೆ. ಕದಂಬರ ಆಳ್ವಿಕೆಯ ಕಾಲದಲ್ಲಿ ಹುಟ್ಟಿದ ದಂತಕಥೆಯ ಕಥಾಹಂದರ ಹೊತ್ತ ಈ ಚಿತ್ರದ ಶೂಟಿಂಗ್‌ ಕೊಡಚಾದ್ರಿ ಬೆಟ್ಟದ ಸುತ್ತಮುತ್ತಲೂ ನಡೆಯಲಿದೆ. ಹೀಗಾಗಿ ರಿಷಬ್‌ ತಮ್ಮ ಊರಿನಲ್ಲೇ ಬೀಡುಬಿಟ್ಟಿದ್ದಾರೆ. ಕೊಲ್ಲೂರು ದೇವಸ್ಥಾನ ಕೆರಾಡಿಗೆ ಸಮೀಪದಲ್ಲೇ ಇದ್ದು, ಇದೇ ಸಂದರ್ಭದಲ್ಲಿ ಮೋಹನ್‌ಲಾಲ್‌ ಅವರನ್ನು ಭೇಟಿಯಾಗಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT